ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಲಕ್ಷಾಂತರ ಬಡ ಜನರ ನೆರವಿಗೆ ಬಂದ ಉಚಿತ ಪಡಿತರ: ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್: ಕೋವಿಡ್‌ ಪಿಡುಗಿನ ಸಂದರ್ಭದಲ್ಲಿ ಲಕ್ಷಾಂತರ ಬಡ ಜನರಿಗೆ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆ (ಪಿಎಂ–ಜಿಕೆಎವೈ) ನೆರವಿಗೆ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಿಳಿಸಿದರು.

ಆಹಾರ ಭದ್ರತಾ ಯೋಜನೆಯ ಫಲಾನುಭವಿಗಳ ಜೊತೆಗೆ ವರ್ಚುವಲ್‌ ಸಂವಾದದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ, ಪಿಎಂ–ಜಿಕೆಎವೈ ಅಡಿಯಲ್ಲಿ ಲಕ್ಷಾಂತರ ಕುಟುಂಬಗಳಿಗೆ ಉಚಿತವಾಗಿ ಪಡಿತರ ವಿತರಿಸಲಾಗುತ್ತಿದೆ. ಇದು ಸಾಂಕ್ರಾಮಿಕದ ಸಮಯದಲ್ಲಿ ಬಡವರ ಚಿಂತೆಗಳನ್ನು ಕಡಿಮೆ ಮಾಡಲು ನೆರವಾಗಿದೆ ಎಂದರು.

ಸರ್ಕಾರವು ಕೋವಿಡ್‌ ಪಿಡುಗಿನ ಸಮಯದಲ್ಲಿ ನಾಗರಿಕರಿಗೆ ಎಲ್ಲ ರೀತಿಯ ನೆರವನ್ನು ಒದಗಿಸಲು ಪ್ರಯತ್ನಿಸುತ್ತಿದೆ ಎಂದರು. ಸ್ವಾತಂತ್ರ್ಯ ನಂತರ ಪ್ರತಿ ಸರ್ಕಾರಗಳು ಬಡವರಿಗೆ ಕಡಿಮೆ ಬೆಲೆಗೆ ಆಹಾರ ಪದಾರ್ಥಗಳನ್ನು ಒದಗಿಸುವ ಬಗ್ಗೆ ಮಾತನಾಡಿವೆ ಎಂದು ಅವರು ಸ್ಮರಿಸಿದರು.

‘ಇತ್ತೀಚಿನ ವರ್ಷಗಳಲ್ಲಿ ಕಡಿಮೆ ಬೆಲೆಗೆ ಪಡಿತರ ವಿತರಿಸುವ ಯೋಜನೆಗಳು ಮತ್ತು ಬಜೆಟ್‌ ಹೆಚ್ಚಾಗಿದೆ. ಆದರೆ ಪರಿಣಾಮ ಸೀಮಿತವಾಗಿದೆ. ಒಂದೆಡೆ ಆಹಾರ ಸಂಗ್ರಹಣೆ ಹೆಚ್ಚುತ್ತಲೇ ಸಾಗಿದೆ. ಆದರೆ ಹಸಿವು ಮತ್ತು ಅಪೌಷ್ಟಿಕತೆಯ ಅನುಪಾತದಲ್ಲಿ ಕಡಿಮೆಯಾಗಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು