ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನದಲ್ಲಿ ಹಕ್ಕಿ ಜ್ವರದ ಪ್ರಕರಣಗಳ ಸಂಖ್ಯೆ ಹೆಚ್ಚಳ

Last Updated 8 ಜನವರಿ 2021, 15:33 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದ ಹಲವು ಜಿಲ್ಲೆಗಳಲ್ಲಿ ಹಕ್ಕಿ ಜ್ವರದ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಇದುವರೆಗೆ 2,166 ವಿವಿಧ ಪಕ್ಷಿಗಳಲ್ಲಿ ವೈರಸ್‌ ಪತ್ತೆಯಾಗಿದೆ.

ಹಕ್ಕಿ ಜ್ವರ (ಎಚ್‌5ಎನ್‌8 ವೈರಾಣು) ರಾಜಸ್ಥಾನ ರಾಜಧಾನಿ ಜೈಪುರ ಸೇರಿದಂತೆ 11 ಜಿಲ್ಲೆಗಳಲ್ಲಿ ಪತ್ತೆಯಾಗಿದೆ.

ಪಶುಸಂಗೋಪನಾ ಇಲಾಖೆಯ ಪ್ರಕಾರ ಶುಕ್ರವಾರ ಒಂದೇ ದಿನ 223 ಕಾಗೆಗಳು, 11 ನವಿಲುಗಳು ಮತ್ತು 55 ಪಾರಿವಾಳಗಳು ಸೇರಿದಂತೆ 329 ಪಕ್ಷಿಗಳ ಸಾವು ಸಂಭವಿಸಿದೆ.

ಕೋಳಿ ಸಾಕಾಣಿಕೆ ಮಾಲೀಕರಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಪಶುಸಂಗೋಪನಾ ಇಲಾಖೆ ನಿರ್ದೇಶಕ ವಿರೇಂದ್ರ ಸಿಂಗ್‌ ತಿಳಿಸಿದ್ದಾರೆ.

ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ವೈರಸ್‌ ಹೆಚ್ಚಾಗಿ ಕಾಗೆಗಳಲ್ಲಿ ಕಂಡು ಬರುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT