ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳ ಎನ್‌ಕೌಂಟರ್‌, ಇಬ್ಬರು ಉಗ್ರರ ಹತ್ಯೆ

Last Updated 12 ಅಕ್ಟೋಬರ್ 2021, 8:06 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಫೀರಿಪೊರಾ ಪ್ರದೇಶದಲ್ಲಿ ಶೋಧಕಾರ್ಯ ಆರಂಭಿಸಿದವು. ಕಾರ್ಯಾಚರಣೆ ವೇಳೆ ಉಗ್ರರು, ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು. ಇದು ಭದ್ರತಾ ಪಡೆಗಳು ಎನ್‌ಕೌಂಟರ್‌ ನಡೆಸಲು ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ಜಿಲ್ಲೆಯ ಇಮಾಮ್‌ಸಾಹಿಬ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT