ಭಾನುವಾರ, ಜೂನ್ 20, 2021
30 °C

ಭ್ರಷ್ಟಾಚಾರ: ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವಿರುದ್ಧ ಎಫ್‌ಐಆರ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರ ಆರೋಪದಡಿ ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ನಬಮ್ ತುಕಿ ಅವರ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ.

ಕೋಲ್ಕತ್ತದ ಸಾಲ್ಟ್‌ ಲೇಕ್‌ ಪ್ರದೇಶದಲ್ಲಿ ಕೇಂದ್ರೀಯ ವಿದ್ಯಾಲಯ ಶಾಲೆಯ ಕಾಂಪೌಂಡ್‌ ನಿರ್ಮಾಣದ ಗುತ್ತಿಗೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ಕೈಗೆತ್ತಿಗೊಂಡಿದ್ದಾರೆ.

‘ಕೇಂದ್ರೀಯ ವಿದ್ಯಾಲಯ ಶಾಲೆಯ ಕಾಂಪೌಂಡ್‌ ನಿರ್ಮಾಣಕ್ಕೆ ಟೆಂಡರ್‌ ಅನ್ನು ಕರೆಯದೆ, ಕಾಮಗಾರಿ ಗುತ್ತಿಗೆಯನ್ನು  ಆಗಿನ ಪಿಡಬ್ಲ್ಯೂಡಿ ಸಚಿವರಾಗಿದ್ದ ತುಕಿ ಅವರ ಕುಟುಂಬದ ಸದಸ್ಯರಿಗೆ ನೀಡಲಾಗಿತ್ತು. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಹಾನಿ ಉಂಟಾಗಿದೆ. ಆದರೆ ಸಚಿವರ ಸಂಬಂಧಿಕರು ಲಾಭಗಳಿಸಿದ್ದಾರೆ’ ಎಂದು ಸಿಬಿಐ, ಪ್ರಾಥಮಿಕ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು