ಭಾನುವಾರ, ಆಗಸ್ಟ್ 14, 2022
28 °C

ಬಿಹಾರ ಘಟಕಕ್ಕೆ ಹೊಸ ಅಧ್ಯಕ್ಷರ ನೇಮಕ ಮಾಡಿದ ಚಿರಾಗ್‌ ಪಾಸ್ವಾನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಟ್ನಾ: ಚಿಕ್ಕಪ್ಪನ ವಿರುದ್ಧ ಬಂಡಾಯ ಎದ್ದಿರುವ ಲೋಕಜನಶಕ್ತಿ (ಎಲ್‌ಜೆಪಿ) ಪಕ್ಷದ ನಾಯಕ ಚಿರಾಗ್‌ ಪಾಸ್ವಾನ್‌ ಎಲ್‌ಜೆಪಿಯ ಬಿಹಾರ ಘಟಕಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ.

ಚಿರಾಗ್‌ ಅವರ ಆಪ್ತ ರಾಜು ತಿವಾರಿಯನ್ನು ಬಿಹಾರ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಮೂಲಕ ಚಿಕ್ಕಪ್ಪ ಪಶುಪತಿ ಕುಮಾರ್‌ ಪಾರಾಸ್‌ ಅವರಿಗೆ ಟಾಂಗ್‌ ಕೊಟ್ಟಿದ್ದಾರೆ.

ಬುಧವಾರ ಸಂಜೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಭಾವನಾತ್ಮಕವಾಗಿ ಮಾತನಾಡಿದ ಚಿರಾಗ್‌, ನೀವು ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಅಥವಾ ಪಕ್ಷದ ಸಂಸದೀಯ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಕೇಳಿದ್ದರೆ ನಾನೇ ಬಿಟ್ಟುಕೊಡುತ್ತಿದೆ. ತಂದೆಯ ನಿಧನದ ಬಳಿಕ ನೀವೇ ನನ್ನ ಸರ್ವಸ್ವ ಎಂದು ತಿಳಿದಿದ್ದೆ ಎಂದು ಚಿರಾಗ್‌ ಹೇಳಿದ್ದಾರೆ.

ನಾನು ರಾಮ್‌ವಿಲಾಸ್‌ ಪಾಸ್ವಾನ್‌ ಮಗ, ಸಿಂಹದ ಮರಿ ಇದ್ದಂತೆ ಎನ್ನುವ ಮೂಲಕ ಪಶುಪತಿ ಪಾರಾಸ್‌ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಪಶುಪತಿ ಪಾರಾಸ್‌ ಬಣ, ಚಿರಾಗ್‌ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಇತ್ತ ಚಿರಾಗ್‌ ಕೂಡ ಬಿಹಾರ ಘಟಕಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಮೂಲಕ ಹೊಸ ತಂತ್ರ ಹೂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು