ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶದಿಂದ ಬರುವವರು ಪ್ರತ್ಯೇಕ ಐಸೋಲೇಷನ್ ಕೇಂದ್ರದಲ್ಲಿ ಇರುವ ಅಗತ್ಯವಿಲ್ಲ!

Last Updated 22 ಜನವರಿ 2022, 10:45 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇದುವರೆಗೆ ವಿದೇಶಗಳಿಂದ ಬರುವವರಲ್ಲಿ ಕೋವಿಡ್ ದೃಢಪಟ್ಟರೆ ಕಡ್ಡಾಯವಾಗಿ ಪ್ರತ್ಯೇಕ ಐಸೋಲೇಷನ್ ಕೇಂದ್ರದಲ್ಲಿ ಕ್ವಾರಂಟೈನ್‌ಗೆ ಒಳಪಡಬೇಕು ಎಂಬ ನಿಬಂಧನೆಯಿತ್ತು. ಆದರೆ ಈಗ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಮನೆಯಲ್ಲೇ ಕ್ವಾರಂಟೈನ್‌ನಲ್ಲಿ ಇರಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದೇಶದಿಂದ ಬರುವ ಪ್ರಯಾಣಿಕರಿಗೆ ಗುರುವಾರ ಬಿಡುಗಡೆ ಮಾಡಿರುವ ಪರಿಷ್ಕೃತ ಮಾರ್ಗಸೂಚಿಯಲ್ಲಿ ಏಳು ದಿನಗಳ ಕಾಲ ಕ್ವಾರಂಟೈನ್‌ಗೆ ಒಳಪಡಬೇಕಾಗುತ್ತದೆ. ಬಳಿಕ ಎಂಟನೇ ದಿನದಂದು ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಬೇಕು ಎಂದು ತಿಳಿಸಿದೆ.

ಪರಿಷ್ಕೃತ ಮಾರ್ಗಸೂಚಿಯು ಶನಿವಾರದಿಂದಲೇ ಜಾರಿಗೆ ಬಂದಿದೆ.

ಹಿಂದಿನ ಮಾರ್ಗಸೂಚಿಯಂತೆ ಅತಿ ಹೆಚ್ಚು ಅಪಾಯಕಾರಿ ಕೊರೊನಾ ಸೋಂಕಿನ ರಾಷ್ಟ್ರಗಳು ಸೇರಿದಂತೆ ವಿದೇಶಗಳಿಂದ ಬರುವ ಪ್ರಯಾಣಿಕರು ಕೋವಿಡ್ ಮಾನದಂಡಗಳನ್ನು ಪಾಲಿಸಿಕೊಂಡು ಪ್ರತ್ಯೇಕ ಕೇಂದ್ರದಲ್ಲಿ ಕ್ವಾರಂಟೈನ್‌ನಲ್ಲಿ ಇರಬೇಕಿತ್ತು. ಪರಿಷ್ಕೃತ ಮಾರ್ಗಸೂಚಿಯಲ್ಲಿ ಐಸೋಲೇಷನ್ ಕೇಂದ್ರದಲ್ಲಿ ಕಡ್ಡಾಯ ಪ್ರತ್ಯೇಕವಾಸದ ಷರತ್ತನ್ನು ತೆರವುಗೊಳಿಸಲಾಗಿದೆ.

ಹಾಗಿದ್ದರೂ ಸ್ಕ್ರೀನಿಂಗ್ ಸಮಯದಲ್ಲಿ ರೋಗಲಕ್ಷಣಗಳು ಕಂಡುಬಂದರೆ ಪ್ರಯಾಣಿಕರನ್ನು ತಕ್ಷಣವೇ ಪ್ರತ್ಯೇಕಿಸಿ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಗುವುದು. ಕೋವಿಡ್ ದೃಢಪಟ್ಟರೆ ಸಂಪರ್ಕ ಹೊಂದಿರುವವನ್ನು ಪತ್ತೆ ಹಚ್ಚಿ ಕೋವಿಡ್ ನಿಯಮಗಳಿಗೆ ಅನುಸಾರವಾಗಿ ನಿರ್ವಹಿಸಲಾಗುವುದು ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT