ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ
ಭಾರತದ ಲಸಿಕೆ ಬಗ್ಗೆ ಶಂಕಿಸುವವರು ಹತಾಶ ರಾಜಕಾರಣಿಗಳು: ಕೇಂದ್ರ ಸಚಿವ ನಖ್ವಿ

ಮುಂಬೈ: ‘ಕೋವಿಡ್–19ರ ಚಿಕಿತ್ಸೆ ಸಲುವಾಗಿ ಭಾರತದಲ್ಲಿ ತಯಾರಿಸಲಾಗಿರುವ ಲಸಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವವರು ರಾಜಕೀಯದಲ್ಲಿ ಹತಾಶಗೊಂಡ ಕೆಲ ನಾಯಕರು’ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಟೀಕಿಸಿದ್ದಾರೆ.
ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಯುತ್ತಿರುವಾಗಲೇ ತುರ್ತು ಬಳಕೆಗೆ ಅನುಮತಿ ನೀಡಿರುವ ಭಾರತ್ ಬಯೋಟೆಕ್ ಲಸಿಕೆ ಕುರಿತು ಕಾಂಗ್ರೆಸ್ ಪಕ್ಷದ ಕೆಲವು ನಾಯಕರು ಅನುಮಾನ ವ್ಯಕ್ತಪಡಿಸಿರುವುದಕ್ಕೆ ನಖ್ವಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಭಾರತೀಯ ಹಜ್ ಸಮಿತಿ ಸಭೆಯ ನಂತರ ಮಾತನಾಡಿದ ಅವರು, ‘ರಾಜಕೀಯದಲ್ಲಿ ಸೋಲು ಕಂಡು, ಹತಾಶರಾಗಿರುವವರು ಹೀಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ‘ ಎಂದು ವ್ಯಂಗ್ಯವಾಡಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.