ಶುಕ್ರವಾರ, ಆಗಸ್ಟ್ 6, 2021
23 °C

ವಿಶ್ವಸಂಸ್ಥೆಯ ಅಮೆರಿಕದ ಕಾಯಂ ಪ್ರತಿನಿಧಿ ಜತೆ ಶ್ರಿಂಗ್ಲಾ ಮಾತುಕತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಅಮೆರಿಕ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ ಶ್ರಿಂಗ್ಲಾ ಅವರು ವಿಶ್ವಸಂಸ್ಥೆಯಲ್ಲಿನ ಅಮೆರಿಕದ ಕಾಯಂ ಪ್ರತಿನಿಧಿ ಲಿಂಡಾ ಥಾಮಸ್‌ ಗ್ರೀನ್‌ಫೀಲ್ಡ್‌ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಭದ್ರತಾ ಮಂಡಳಿಯ ವಿಷಯಗಳೂ ಸೇರಿದಂತೆ ಎರಡೂ ದೇಶಗಳ ನಡುವಿನ ಬಹುಪಕ್ಷೀಯ ಸಹಕಾರ ವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆದಿದೆ. ಭಾರತವು ಆಗಸ್ಟ್‌ನಲ್ಲಿ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸಲು ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಈ ಮಾತುಕತೆ ಮಹತ್ವ ಪಡೆದುಕೊಂಡಿದೆ.

‘ಭಾರತದ ವಿದೇಶಾಂಗ ಕಾರ್ಯದರ್ಶಿ ಅವರೊಡನೆ ನಡೆದ ಸಭೆ ಮಹತ್ವದ್ದಾಗಿದ್ದು ಎರಡೂ ದೇಶಗಳ ಆದ್ಯತೆಗಳು ಮತ್ತು ಸವಾಲುಗಳ ಕುರಿತು ಚರ್ಚಿಸಲಾಯಿತು. ಇವುಗಳನ್ನು ಹೇಗೆ ನಿಭಾಯಿಸಬಹುದು ಎಂಬುದರ ಕುರಿತು ಚರ್ಚೆ ನಡೆಯಿತು’ ಎಂದು ಲಿಂಡಾ ಥಾಮಸ್‌ ಗ್ರೀನ್‌ಫೀಲ್ಡ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು