ನನವದೆಹಲಿ: ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಫೆಡೆಕ್ಸ್ ವಿಮಾನಕ್ಕೆ ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಪಕ್ಷಿಯೊಂದು ಡಿಕ್ಕಿ ಹೊಡೆದಿದೆ. ಇದರಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ 10.46ಕ್ಕೆ ಎಫ್‌ಎಕ್ಸ್ 5279 ಫ್ಲೈಟ್ ಟೇಕ್ ಆಫ್ ಕೆಲವೇ ಕ್ಷಣಗಳಲ್ಲಿ 1000 ಅಡಿ ಎತ್ತರದಲ್ಲಿ ಹಕ್ಕಿಯೊಂದು ಡಿಕ್ಕಿ ಹೊಡೆದ ನಂತರ ಸಂಪೂರ್ಣ ತುರ್ತು ಲ್ಯಾಂಡಿಂಗ್ ಘೋಷಿಸಲಾಗಿದೆ.
ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತಪಾಸಣೆ ಬಳಿಕ ಮಧ್ಯಾಹ್ನ ಮತ್ತೆ ಟೇಕಾಫ್ ಆಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತಿಳಿಸಿದೆ.
ಕಳೆದ ಮೂರು –ನಾಲ್ಕು ದಿನಗಳಿಂದ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ದೆಹಲಿ ವಿಮಾನ ನಿಲ್ದಾಣದಿಂದ 22 ವಿಮಾನಗಳನ್ನು ಬೇರೆ ಕಡೆಗೆ ತಿರುಗಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.