ಶನಿವಾರ, ಡಿಸೆಂಬರ್ 4, 2021
24 °C

ರೋಮ್‌ನಲ್ಲಿ ಅ. 30ರಿಂದ ಜಿ–20 ಶೃಂಗಸಭೆ: ಪ್ರಧಾನಿ ಮೋದಿ ಭಾಗಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಟಲಿಯ ರಾಜಧಾನಿ ರೋಮ್‌ನಲ್ಲಿ ಇದೇ 30ರಿಂದ ನಡೆಯಲಿರುವ ಜಿ–20 ಶೃಂಗಸಭೆಯಲ್ಲಿ  ಅಫ್ಗನ್‌ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಜಾಗತಿಕವಾಗಿ ಸಂಘಟಿತ ಕಾರ್ಯತಂತ್ರದ ಅವಶ್ಯಕತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ಭಾನುವಾರ ಹೇಳಿವೆ.

ಈ ವೇಳೆ ಹವಾಮಾನ ಬದಲಾವಣೆ ಮತ್ತು ಕೋವಿಡ್‌ ಪಿಡುಗಿನ ಸವಾಲುಗಳನ್ನು ಎದುರಿಸುವ ಬಗ್ಗೆಯೂ ಮಾತನಾಡಲಿದ್ದಾರೆ ಎಂದೂ ಹೇಳಲಾಗಿದೆ.

ಓದಿ: 

ಮೋದಿ ಅವರು ಗುರುವಾರ ಅಥವಾ ಶುಕ್ರವಾರ ಇಟಲಿ ಮತ್ತು ಸ್ಕಾಟ್ಲೆಂಡ್‌ ಪ್ರವಾಸ ಆರಂಭಿಸುವ ಸಾಧ್ಯತೆ ಇದೆ ಎಂದೂ ಮೂಲಗಳು ತಿಳಿಸಿವೆ.  

ಶೃಂಗಸಭೆಯಲ್ಲಿ ಅಫ್ಗಾನಿಸ್ತಾನದ ಪರಿಸ್ಥಿತಿಯು ಪ್ರಮುಖವಾಗಿ ಪ್ರಸ್ತಾಪವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು