ಪಟ್ನಾ: ಜೂನ್‌ನಲ್ಲಿ ಜಿ–20 ಸಭೆ

ನವದೆಹಲಿ: ಪಟ್ನಾದಲ್ಲಿ ಜಿ–20ರ ಸಭೆಯು ಜೂನ್‌ನಲ್ಲಿ ನಡೆಯಲಿದೆ ಎಂದು ಬಿಹಾರ ಸರ್ಕಾರ ಹೇಳಿದೆ.
‘ಜಿ–20ರ ಸಭೆಯನ್ನು ಮಾರ್ಚ್ ಮೊದಲ ವಾರದಲ್ಲಿ ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಇದೀಗ ಈ ದಿನಾಂಕವನ್ನು ಜೂನ್‌ಗೆ ಮುಂದೂಡಲಾಗಿದೆ’ ಎಂದೂ ತಿಳಿಸಿದೆ.
ಭಾರತವು ಆತಿಥ್ಯ ವಹಿಸಿರುವ ಜಿ–20 ಶೃಂಗಸಭೆಯ ಅಂಗವಾಗಿ ದೇಶಾದ್ಯಂತ 55 ಸ್ಥಳಗಳಲ್ಲಿ 200 ಕ್ಕೂ ಹೆಚ್ಚು ಸಭೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.