ಸೋಮವಾರ, ಮಾರ್ಚ್ 27, 2023
32 °C

G-20 ಶೃಂಗಸಭೆ: ವಿಶ್ವ ನಾಯಕರೊಂದಿಗೆ ಪ್ರಧಾನಿ ಮೋದಿ ಮ್ಯಾಂಗ್ರೋವ್ ಕಾಡಿಗೆ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಿ: ಜಿ–20 ಶೃಂಗಸಭೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ವಿಶ್ವ ನಾಯಕರು ಇಲ್ಲಿನ ಮ್ಯಾಂಗ್ರೋವ್ ಕಾಡಿಗೆ ಬುಧವಾರ ಭೇಟಿ ನೀಡಿದರು.

ಇದಕ್ಕೂ ಮುಂಚೆ ಅವರು ಸಸಿಗಳನ್ನು ನೆಟ್ಟರು. ಇದೇ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಮೆಟ್ಟಿಲು ಹತ್ತುವಾಗ ಮುಗ್ಗರಿಸಿದರು. ಇಂಡೋನೆಷ್ಯಾ ಅಧ್ಯಕ್ಷ ಜೋಕೋ ವಿಡೋಡೋ ಅವರನ್ನು ಹಿಡಿದುಕೊಂಡರು. ನಂತರ ಮ್ಯಾಂಗ್ರೋವ್ ಕಾಡಿನತ್ತ  ಹೆಜ್ಜೆ ಹಾಕಿದರು.

ವಿಶ್ವ ನಾಯಕರೊಂದಿಗೆ ಮೋದಿ ದ್ವಿಪಕ್ಷೀಯ ಸಭೆ: ಪ್ರಧಾನಿ ಮೋದಿ ಅವರು ಸೆನೆಗಲ್ ಗಣರಾಜ್ಯದ ಅಧ್ಯಕ್ಷ ಮ್ಯಾಕಿ ಸಾಲ್, ನೆದರ್‌ಲ್ಯಾಂಡ್‌ನ ಪಿಎಂ ಮಾರ್ಕ್ ರುಟ್ಟೆ, ಜಪಾನ್ ಪಿಎಂ ಫ್ಯೂಮಿಯೊ ಕಿಶಿಡಾ, ಯುಎಸ್ ಅಧ್ಯಕ್ಷ ಜೋ ಬೈಡನ್ ಹಾಗು ವಿಶ್ವ ಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಅವರನ್ನು ಮಾಡಿ  ದ್ವಿಪಕ್ಷೀಯ ಸಭೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು