ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್‌ ಜೋಡೊ ಯಾತ್ರೆ: ಜೊತೆಯಾಗಿ ಹೆಜ್ಜೆ ಹಾಕಿದ ಗಾಂಧಿ ಕುಟುಂಬ

Last Updated 24 ಡಿಸೆಂಬರ್ 2022, 11:24 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ತಲುಪಿರುವ 'ಭಾರತ್‌ ಜೋಡೊ ಯಾತ್ರೆ'ಯಲ್ಲಿ ಗಾಂಧಿ ಕುಟುಂಬ ಜೊತೆಯಾಗಿ ಹೆಜ್ಜೆ ಹಾಕಿತು. ಇದೇ ಮೊದಲ ಬಾರಿಗೆ ಸಂಪೂರ್ಣ ಕುಟುಂಬ ಸದಸ್ಯರು ಯಾತ್ರೆಯಲ್ಲಿ ಜೊತೆಯಾಗಿ ಕಾಣಿಸಿಕೊಂಡರು.

ದೆಹಲಿಯ ಆಶ್ರಮ ಚೌಕ್‌ನಿಂದ ಶನಿವಾರ ಬೆಳಗ್ಗೆ ಹೊರಟ ಯಾತ್ರೆಯಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಗಳು ಪ್ರಿಯಾಂಕಾ ಗಾಂಧಿ, ಅಳಿಯ ರಾಬರ್ಟ್‌ ವಾದ್ರಾ ಹಾಗೂ ಮೊಮ್ಮಕ್ಕಳ ಜೊತೆ ರಾಹುಲ್‌ ಗಾಂಧಿ ಅವರನ್ನು ಜೊತೆಗೂಡಿದರು. ತುಸು ದೂರದ ವರೆಗೆ ಒಟ್ಟಾಗಿ ಹೆಜ್ಜೆ ಹಾಕಿದರು.

ಸೋನಿಯಾ ಗಾಂಧಿ ಅವರು ಯಾತ್ರೆಯಲ್ಲಿ ಎರಡನೇ ಬಾರಿಗೆ ಪಾಲ್ಗೊಂಡರು. ಅಕ್ಟೋಬರ್‌ ತಿಂಗಳಲ್ಲಿ ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ಯಾತ್ರೆ ಸಾಗುತ್ತಿದ್ದಾಗ ಸೋನಿಯಾ ಗಾಂಧಿ ಪಾಲ್ಗೊಂಡಿದ್ದರು.

ಸೋನಿಯಾ ಗಾಂಧಿ ಅವರನ್ನು ಅಪ್ಪಿಕೊಂಡಿರುವ ಚಿತ್ರವನ್ನು ಟ್ವೀಟ್‌ ಮಾಡಿರುವ ರಾಹುಲ್‌, 'ಅಮ್ಮನಿಂದ ಪಡೆದ ಪ್ರೀತಿಯನ್ನು ನಾನು ದೇಶದೊಂದಿಗೆ ಹಂಚಿಕೊಳ್ಳುತ್ತಿದ್ದೇನೆ' ಎಂದಿದ್ದಾರೆ. ಈ ಚಿತ್ರವನ್ನು ಕಾಂಗ್ರೆಸ್‌ ಹಂಚಿಕೊಂಡಿದೆ.

'ಗಾಂಧಿ ಕುಟುಂಬವು ಕಾಂಗ್ರೆಸ್‌ ಕುಟುಂಬವಾಗಿದೆ. ನಾವೆಲ್ಲರೂ ಒಂದು ಕುಟುಂಬದವರಾಗಿದ್ದೇವೆ. ಗಾಂಧಿ ಕುಟುಂಬದ ಸದಸ್ಯರೆಲ್ಲರೂ ಜೊತೆಯಾಗಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದು ನಮ್ಮೆಲ್ಲರಿಗೂ ಸಂತಸವನ್ನು ನೀಡಿದ ಕ್ಷಣವಾಗಿದೆ' ಎಂದು ಪಕ್ಷದ ಮುಖಂಡ ಕೆ.ಸಿ.ವೇಣುಗೋಪಾಲ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT