ನವದೆಹಲಿ: ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜೈಲಿನಲ್ಲಿದ್ದ ಪಾತಕಿ ಛೋಟಾ ರಾಜನ್‌ನನ್ನು ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್)ಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ರಾಜನ್‌ಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಮಂಗಳವಾರ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಆದರೆ, ಈ ಕುರಿತು ಆಸ್ಪತ್ರೆಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ‘ ಎಂದು ಹಿರಿಯ ಕಾರಾಗೃಹ ಅಧಿಕಾರಿ ತಿಳಿಸಿದ್ದಾರೆ.
ತಿಹಾರ್ ಜೈಲಿನಲ್ಲಿರುವ ಛೋಟಾ ರಾಜನ್‌ಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಏಪ್ರಿಲ್ 24ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡ ನಂತರ ಅವರನ್ನು ಮತ್ತೆ ಜೈಲಿಗೆ ಕಳುಹಿಸಲಾಗಿತ್ತು.
2015 ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಗಡೀಪಾರು ಮಾಡಿದ ನಂತರ ಪಾತಕಿ ಛೋಟಾ ರಾಜನ್‌ನನ್ನು ಬಂಧಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.