ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಗತ ಪಾತಕಿ ಛೋಟಾ ರಾಜನ್ ಆಸ್ಪತ್ರೆಯಿಂದ ಬಿಡುಗಡೆ: ತಿಹಾರ್ ಜೈಲಿಗೆ ವಾಪಸ್

Last Updated 31 ಜುಲೈ 2021, 8:24 IST
ಅಕ್ಷರ ಗಾತ್ರ

ನವದೆಹಲಿ: ಹೊಟ್ಟೆ ನೋವಿನಿಂದ ಏಮ್ಸ್ ಆಸ್ಪತ್ರೆಗೆ ದಾಲಾಗಿದ್ದ ಭೂಗತ ಪಾತಕಿ ಛೋಟಾ ರಾಜನ್‌ನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಆತನನ್ನು ಮರಳಿ ತಿಹಾರ್ ಜೈಲಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

61 ವರ್ಷ ವಯಸ್ಸಿನ ರಾಜನ್‌ಗೆ ಚಿಕಿತ್ಸೆ ನೀಡಿ ಶುಕ್ರವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಕಾರಾಗೃಹ ವಿಭಾಗದ ಡಿಜಿ ಸಂದೀಪ್ ಗೋಯಲ್ ತಿಳಿಸಿದ್ದಾರೆ.

ಕೋವಿಡ್ ಸೋಂಕು ದೃಢಪಟ್ಟ ಕಾರಣ ಕಳೆದ ಏಪ್ರಿಲ್‌ನಲ್ಲಿಯೂ ರಾಜನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡ ಬಳಿಕ ಮತ್ತೆ ಜೈಲಿಗೆ ಕರೆದೊಯ್ಯಲಾಗಿತ್ತು.

ಇಂಡೋನೇಷ್ಯಾದ ಬಾಲಿಯಿಂದ 2015ರಲ್ಲಿ ಗಡಿಪಾರಾಗಿದ್ದ ಛೋಟಾ ರಾಜನ್‌ನನ್ನು ಹೆಚ್ಚಿನ ಭದ್ರತೆಯೊಂದಿಗೆ ತಿಹಾರ್ ಜೈಲಿನಲ್ಲಿರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT