ಸೋಮವಾರ, ಸೆಪ್ಟೆಂಬರ್ 28, 2020
20 °C

ಕೇರಳ: 20 ಕೋಟಿ ಮೌಲ್ಯದ 500 ಕೆ.ಜಿ ಗಾಂಜಾ ವಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರ: ಸಮೀಪದ ಅಟ್ಟಿಂಗಲ್‌ನಲ್ಲಿ ಸುಮಾರು ₹ 20 ಕೋಟಿ ಮೌಲ್ಯದ 500 ಕೆ.ಜಿ ಗಾಂಜಾವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿಗಳು ಜಾರ್ಖಂಡ್‌ ಮತ್ತು ಪಂಜಾಬ್‌ನವಾಗಿದ್ದಾರೆ. ಮೈಸೂರಿನಲ್ಲಿ ನೆಲೆಸಿದ್ದ ಕೇರಳದವರು ಗಾಂಜಾ ಸಾಗಿಸುತ್ತಿರುವ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.. ರಾಷ್ಟ್ರೀಯ ಸಾರಿಗೆ ಪರವಾನಗಿ ಹೊಂದಿದ ಲಾರಿಯನ್ನು ತಡೆದಾಗ ಗಾಂಜಾ ಪತ್ತೆಯಾಗಿದೆ ಎಂದು ಅಬಕಾರಿ ಇನ್‌ಸ್ಪೆಕ್ಟರ್‌ ಅನಿಲ್‌ಕುಮಾರ್‌ ತಿಳಿಸಿದ್ದಾರೆ.  

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು