ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಧುಲಿಯಾ, ಪಾರ್ದೀವಾಲಾ ಪ್ರಮಾಣ ವಚನ

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿಕೆ
Last Updated 9 ಮೇ 2022, 11:36 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸುಧಾಂಶು ಧೂಲಿಯಾ ಮತ್ತು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಜಮ್‌ಶೆದ್‌ ಬಿ. ಪಾರ್ದೀವಾಲಾ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಇದರೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, ಪೂರ್ಣ ಪ್ರಮಾಣದಲ್ಲಿ ನ್ಯಾಯಮೂರ್ತಿಗಳ ಹುದ್ದೆಗಳು ಭರ್ತಿಯಾಗಿವೆ. ಈ ವರ್ಷದ ಜನವರಿ 4ರಂದು ನ್ಯಾ. ಆರ್. ಸುಭಾಷ್ ರೆಡ್ಡಿ ಅವರ ನಿವೃತ್ತಿಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 32ಕ್ಕೆ ಇಳಿದಿತ್ತು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು, ನ್ಯಾಯಮೂರ್ತಿಗಳಾದ ಧೂಲಿಯಾ ಹಾಗೂ ಪಾರ್ದೀವಾಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT