ಮಂಗಳವಾರ, ಜನವರಿ 18, 2022
23 °C

ವಾರದಲ್ಲಿ ಮೂರನೇ ಬಾರಿ ಐಸಿಸ್‌ನಿಂದ ಗೌತಮ್ ಗಂಭೀರ್‌ಗೆ ಕೊಲೆ ಬೆದರಿಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್‌ ಗಂಭೀರ್‌ ಅವರಿಗೆ ಐಸಿಸ್‌ನಿಂದ ಮೂರನೇ ಬಾರಿಗೆ ಕೊಲೆ ಬೆದರಿಕೆ ಬಂದಿದೆ.

‘ಗೌತಮ್ ಗಂಭೀರ್‌ ಅವರಿಗೆ ಭಾನುವಾರ ಬೆಳಿಗ್ಗೆ ಇ–ಮೇಲ್ ಬಂದಿದೆ. ಒಂದು ವಾರದೊಳಗೆ ಅವರಿಗೆ ಬಂದ ಮೂರನೇ ಬೆದರಿಕೆ ಇದಾಗಿದೆ. ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ನಾವು ನಿಮ್ಮನ್ನು (ಗಂಭೀರ್) ಮತ್ತು ನಿಮ್ಮ ಕುಟುಂಬದವರನ್ನು ಕೊಲೆ ಮಾಡುತ್ತೇವೆ’ ಎಂದು ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಬೆದರಿಕೆ ಹಿನ್ನೆಲೆಯಲ್ಲಿ ಗೌತಮ್ ಗಂಭೀರ್‌ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ... ಬಿಜೆಪಿ ಸಂಸದ ಗೌತಮ್‌ ಗಂಭೀರ್‌ಗೆ ಐಸಿಸ್‌ನಿಂದ ಎರಡನೇ ಕೊಲೆ ಬೆದರಿಕೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು