ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋನಿಯಾ ಭೇಟಿಯಾದ ಅಶೋಕ್ ಗೆಹಲೋತ್‌: ಸಂಪುಟ ಪುನರ್‌ ರಚನೆ ಕುರಿತು ಚರ್ಚೆ

Last Updated 11 ನವೆಂಬರ್ 2021, 10:35 IST
ಅಕ್ಷರ ಗಾತ್ರ

ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಗುರುವಾರ ಭೇಟಿಯಾಗಿ ರಾಜ್ಯದಲ್ಲಿನ ರಾಜಕೀಯ ಪರಿಸ್ಥಿತಿ ಮತ್ತು ಸಂಪುಟ ಪುನರ್‌ರಚನೆ ಕುರಿತು ಚರ್ಚಿಸಿದ್ದಾಗಿ ಮೂಲಗಳು ತಿಳಿಸಿವೆ.

ಗೆಹಲೋತ್‌ ಅವರು ಬುಧವಾರ ರಾತ್ರಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ಎಐಸಿಸಿಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜಸ್ಥಾನದಲ್ಲಿ ಪಕ್ಷದ ಉಸ್ತುವಾರಿಯಾಗಿರುವ ಅಜಯ್ ಮಾಕನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ, ಸಂಪುಟ ಪುನರ್‌ ರಚನೆ ಕುರಿತು ಚರ್ಚೆ ನಡೆಸಿದ್ದರು.

ಕೆಲವೇ ದಿನಗಳಲ್ಲಿ ರಾಜಸ್ಥಾನದ ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆಗಳಾಗಲಿವೆ. ಸಚಿವ ಸಂಪುಟಕ್ಕೆ ಹೊಸಬರನ್ನು ತೆಗೆದುಕೊಳ್ಳುವಾಗ ’ಒಬ್ಬರಿಗೆ ಒಂದೇ ಹುದ್ದೆ’ ಸೂತ್ರವನ್ನು ಅಳವಡಿಸುವುದು ಸೇರಿದಂತೆ, ವಿವಿಧ ವಿಧಾನಗಳನ್ನು ರೂಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ನಾಯಕರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೆಹಲೋತ್‌, ’ಸಂಪುಟ ಪುನರ್‌ರಚನೆ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದರು.‌

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರವು ಮತ್ತಷ್ಟು ಕಡಿಮೆ ಮಾಡಬೇಕು. ಕೇಂದ್ರದ ನಿಲುವನ್ನು ಅನುಸರಿಸುವ ಮೂಲಕ ರಾಜ್ಯಗಳು ’ವ್ಯಾಟ್‌’ ಕಡಿಮೆ ಮಾಡುತ್ತವೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT