ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿನ ವರ್ಷದ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಸಿಎಂ ಅಶೋಕ್ ಗೆಹಲೋತ್

Last Updated 10 ಫೆಬ್ರುವರಿ 2023, 7:20 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಶುಕ್ರವಾರ ಈ ಸಾಲಿನ ಬಜೆಟ್‌ ಪ್ರತಿ ಓದುವ ಬದಲು, ಹಿಂದಿನ ವರ್ಷದ ಬಜೆಟ್‌ ಪ್ರತಿ ಓದಿ ನಗೆಪಾಟಲಿಗೆ ಈಡಾಗಿದ್ದಾರೆ.

ಬಜೆಟ್‌ನ ಮೊದಲ ಎರಡು ಘೋಷಣೆಗಳನ್ನು ಮುಖ್ಯಮಂತ್ರಿ ಮಾಡುತ್ತಲೇ ಪ್ರತಿಪಕ್ಷಗಳು ಗದ್ದಲ ಸೃಷ್ಟಿಸಿದವು, ಸದನದ ಬಾವಿಗೆ ನುಗ್ಗಿದವು.

ಸಮಾಧಾನದಿಂದ ಇರುವಂತೆ ಸ್ಪೀಕರ್ ಸಿಪಿ ಜೋಶಿ ಅವರು ಕೇಳಿಕೊಂಡರೂ ಪ್ರತಿಪಕ್ಷಗಳು ಗದ್ದಲ ಮುಂದುವರಿಸಿದ್ದರಿಂದ ಸದನವನ್ನು ಅರ್ಧ ಗಂಟೆ ಮುಂದೂಡಲಾಯಿತು.

ಕಲಾಪ ಮುಂದೂಡಿದ ನಂತರ ಬಿಜೆಪಿ ಶಾಸಕರು ಸದನದ ಬಾವಿಯೊಳಗೆ ಧರಣಿ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕಿ, ಮಾಜಿ ಸಿಎಂ ವಸುಂಧರಾ ರಾಜೆ ಸಿಂಧಿಯಾ, ’8 ನಿಮಿಷಗಳ ಕಾಲ ಸಿಎಂ ಹಳೆಯ ಬಜೆಟ್ ಪ್ರತಿಯನ್ನೇ ಓದಿದರು. ನಾನು ಸಿಎಂ ಆಗಿದ್ದಾಗ ಕನಿಷ್ಠ ಎರಡು-ಮೂರು ಬಾರಿ ಬಜೆಟ್ ಪ್ರತಿ ಓದುತ್ತಿದ್ದೆ ಮತ್ತು ಪರಿಶೀಲಿಸುತ್ತಿದ್ದೆ. ಈ ರೀತಿಯ ದೊಡ್ಡ ದಾಖಲೆಯನ್ನು ನಿರ್ಲಕ್ಷ್ಯದಿಂದ ಓದಿರುವ ಸಿಎಂ ಕೈಯಲ್ಲಿ ರಾಜಸ್ಥಾನ ಎಷ್ಟು ಸುರಕ್ಷಿತವಾಗಿದೆ ಎಂಬುದನ್ನು ಯಾರಾದರೂ ಊಹಿಸಬಹುದು’ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಜೆಟ್ ಅನ್ನು ನೇರಪ್ರಸಾರ ಮಾಡಲಾಗುತ್ತಿತ್ತು! ಹೀಗಾಗಿ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT