ಸೋಮವಾರ, ಮೇ 23, 2022
21 °C

ಸಂಪುಟ ಪುನರ್‌ರಚನೆ ಸಾಧ್ಯತೆ: ಪ್ರಿಯಾಂಕಾ ಭೇಟಿ ಮಾಡಿದ ಸಿಎಂ ಗೆಹಲೋತ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್ ಅವರು ಕಾಂಗ್ರೆಸ್‌ನ ಹಿರಿಯ ಮುಖಂಡರನ್ನು ಬುಧವಾರ ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ.

ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ಮುಖ್ಯಮಂತ್ರಿ ಗೆಹಲೋತ್‌ ಅವರ ಈ ಭೇಟಿ ಕುತೂಹಲ ಕೆರಳಿಸಿದೆ.

ಮುಖಂಡ ರಾಹುಲ್‌ ಗಾಂಧಿ ನಿವಾಸದಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಗೆಹಲೋತ್‌ ಅವರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಈ ವೇಳೆ ರಾಹುಲ್‌ ಗಾಂಧಿ ಅವರು ಇರಲಿಲ್ಲ. ಮುಖಂಡರಾದ ಅಜಯ್ ಮಾಕೇನ್ ಹಾಗೂ ಕೆ.ಸಿ.ವೇಣುಗೋಪಾಲ್‌ ಇದ್ದರು ಎಂದು ಮೂಲಗಳು ಹೇಳಿವೆ.

ಸಂಭಾವ್ಯ ವಿಸ್ತರಣೆಯಲ್ಲಿ ಸಚಿನ್‌ ಪೈಲಟ್ ಬೆಂಬಲಿಗರು ಸೇರಿದಂತೆ ಎಲ್ಲ ಗುಂಪುಗಳಿಗೆ ಪ್ರಾತಿನಿಧ್ಯ ನೀಡಬೇಕಾದ ಒತ್ತಡದಲ್ಲಿ ಗೆಹಲೋತ್‌ ಇದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರೊಂದಿಗಿನ ಭೇಟಿ ಹಲವು ಚರ್ಚೆಗಳಿಗೆ ಕಾರಣವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು