ಶುಕ್ರವಾರ, ಜುಲೈ 1, 2022
22 °C

ಚುನಾವಣಾ ಕೊಡುಗೆ ಮುಗಿಯುವ ಮುನ್ನ ಪೆಟ್ರೋಲ್ ಟ್ಯಾಂಕ್ ತುಂಬಿಸಿಕೊಳ್ಳಿ: ರಾಹುಲ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆ ಚುನಾವಣೆ ಬಳಿಕ ಇಂಧನ ಬೆಲೆ ಏರಿಕೆ ಸನ್ನಿಹಿತವಾಗಿದೆ. ಚುನಾವಣೆ ಕೊಡುಗೆ ಮುಗಿಯುವ ಮುನ್ನವೇ ತಮ್ಮ ತಮ್ಮ ಪೆಟ್ರೋಲ್ ಟ್ಯಾಂಕ್‌ಗಳನ್ನು ತುಂಬಿಸಿಕೊಳ್ಳಿ ಎಂದು ಜನರಿಗೆ ಕರೆ ನೀಡಿದ್ದಾರೆ.

ಇಂಧನ ದರ ಏರಿಕೆಗೆ ಸಂಬಂಧಿಸಿದಂತೆ ಟ್ವಿಟರ್‌ನಲ್ಲಿ ಪೆಟ್ರೋಲ್ ಬಂಕ್ ಚಿತ್ರವೊಂದನ್ನು ಹಂಚಿಕೊಂಡಿರುವ ರಾಹುಲ್‌, 'ಕೂಡಲೇ ನಿಮ್ಮ ಪೆಟ್ರೋಲ್ ಟ್ಯಾಂಕ್‌ಗಳನ್ನು ಭರ್ತಿಮಾಡಿಕೊಳ್ಳಿ. ಮೋದಿ ಸರ್ಕಾರದ ಚುನಾವಣಾ ಕೊಡುಗೆ ಸದ್ಯದಲ್ಲೇ ಕೊನೆಯಾಗಲಿದೆ' ಎಂದು ಹೇಳಿದ್ದಾರೆ.

ಮೋದಿ ಸರ್ಕಾರ ಚುನಾವಣೆ ಸಮಯದಲ್ಲಿ ಇಂಧನ ಬೆಲೆ ಏರಿಕೆಯನ್ನು ತಡೆಹಿಡಿಯುತ್ತದೆ ಮತ್ತು ಚುನಾವಣೆ ಮುಗಿದ ಬಳಿಕ ಬೆಲೆ ಏರಿಕೆ ಮಾಡುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಫೆ.10 ರಿಂದ ಆರಂಭವಾಗಿದ್ದು, ಮಾರ್ಚ್ 07ಕ್ಕೆ ಕೊನೆಯಾಗಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು