ಸೋಮವಾರ, ಆಗಸ್ಟ್ 15, 2022
22 °C

ಗಾಜಿಯಾಬಾದ್‌: ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದ ಪ್ರಕರಣ– ಟ್ವಿಟರ್‌ಗೆ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ವೃದ್ಧ ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದ ಪ್ರಕರಣದ ಮೊಕದ್ದಮೆ ಸಂಬಂಧ ವಿಚಾರಣೆಯಲ್ಲಿ ಭಾಗವಹಿಸುವಂತೆ ಟ್ವಿಟರ್‌ ಸಂಸ್ಥೆಯ ಭಾರತದ ವ್ಯವಸ್ಥಾಪಕ ನಿರ್ದೇಶಕ ಮನೀಶ್‌ ಮಹೇಶ್ವರಿ ಅವರಿಗೆ ಉತ್ತರ ಪ್ರದೇಶದ ಗಾಜಿಯಾಬಾದ್‌ ಪೊಲೀಸರು ಗುರುವಾರ ರಾತ್ರಿ ನೋಟಿಸ್‌ ನೀಡಿದ್ದಾರೆ.

7 ದಿನಗಳ ಒಳಗೆ ಲೋನಿ ಪೊಲೀಸ್‌ ಠಾಣೆಗೆ ಹಾಜರಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಲು ಮನೀಶ್‌ ಅವರಿಗೆ ಸೂಚಿಸಿದ್ದಾರೆ.

ಜೈ ಶ್ರೀರಾಮ್‌ ಘೋಷಣೆ ಕೂಗುವಂತೆ ಒತ್ತಾಯಿಸಿ ವ್ಯಕ್ತಿಯ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಬಿಂಬಿಸುವ ವಿಡಿಯೊವನ್ನು ಟ್ವಿಟರ್‌ನಲ್ಲಿ ಕೆಲವರು ಪೋಸ್ಟ್‌ ಮಾಡಿದ್ದರು. ಈ ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ವೈಯಕ್ತಿಕ ಕಾರಣಗಳಿಂದ ನಡೆದಿರುವ ಘಟನೆ. ಇದರಲ್ಲಿ ಕೋಮುದ್ವೇಷದ ಉದ್ದೇಶ ಇಲ್ಲ. ಆದರೆ ಈ ವಿಡಿಯೊಗಳನ್ನು ಕೋಮು ಸೌಹಾರ್ದ ಕದಡುವ ಉದ್ದೇಶದಿಂದ ಹಂಚಿಕೊಳ್ಳಲಾಗಿದೆ. ಆದರೆ ಈ ಟ್ವೀಟ್‌ಗಳನ್ನು ಅಳಿಸುವ ಕ್ರಮವನ್ನು ಟ್ವಿಟರ್‌ ಸಂಸ್ಥೆ ತೆಗೆದು
ಕೊಂಡಿಲ್ಲ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.  

ಇದೇ ಮೊದಲ ಬಾರಿಗೆ, ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳ ಅನ್ವಯ ಸರ್ಕಾರ ಕ್ರಮ ಕೈಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು