ಭಾನುವಾರ, ಮೇ 16, 2021
23 °C

ಸುಧಾರಣೆ ಹುಡುಕುತ್ತಿರುವ ಕಾಂಗ್ರೆಸ್‌ನಲ್ಲಿ ಗೊಂದಲವಿಲ್ಲ: ಗುಲಾಂ ನಬಿ ಆಜಾದ್

ಎಎನ್‌ಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಸುಧಾರಣೆ ಹುಡುಕುತ್ತಿರುವ ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಹೇಳಿದ್ದಾರೆ.

ಬಿಹಾರ ವಿಧಾನಸಭೆ ಮತ್ತು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಹಿನ್ನಡೆ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಹೌದು, ಚುನಾವಣೆಯಲ್ಲಿ ಪಕ್ಷದ ಹಿನ್ನಡೆ ಮತ್ತು ಫಲಿತಾಂಶದ ಬಗ್ಗೆ ನಾವು ಪರಾಮರ್ಶೆ ನಡೆಸುತ್ತಿದ್ದೇವೆ. ಕಾಂಗ್ರೆಸ್‌ ಸೋಲಿಗೆ ನಾಯಕತ್ವವನ್ನು ದೂಷಿಸುವುದಿಲ್ಲ. ಕಾರ್ಯಕರ್ತರು ಪಕ್ಷದ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ’ ಎಂದು ಹೇಳಿದ್ದಾರೆ.

‘ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಗಾಂಧಿ ಕುಟುಂಬದವರು ಸದ್ಯ ಹೆಚ್ಚಿನದನ್ನು ಮಾಡಲು ಸಾಧ್ಯವಿಲ್ಲದ ಕಾರಣ ನಾನು ಅವರಿಗೆ ಕ್ಲೀನ್‌ಚಿಟ್‌ ನೀಡುತ್ತಿದ್ದೇನೆ. ಆದರೆ, ನಾಯಕತ್ವ ಬದಲಾವಣೆ ಕುರಿತು ನಮ್ಮ ಬೇಡಿಕೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.

‘ಪಕ್ಷ ಸಂಘಟನೆ ಉದ್ದೇಶದಿಂದ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರ್ಥಮಾಡಿಕೊಂಡು ಕೆಲಸ ಮಾಡಬೇಕಾಗಿದೆ. ಆದರೆ, ನಮ್ಮಲ್ಲಿ ಪದಾಧಿಕಾರಿಗಳನ್ನು ನೇಮಿಸಲಾಗುತ್ತದೆ. ಆದರೆ, ಅವರು ಸಂಘಟನೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘72 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್‌ ಪಕ್ಷ ಕಳೆದ ಎರಡು ಅವಧಿಗಳಲ್ಲಿ ಲೋಕಸಭೆಯಲ್ಲಿ ವಿರೋಧ ಪಕ್ಷದ ಸ್ಥಾನವನ್ನೂ ಹೊಂದಿಲ್ಲ. ಕಾಂಗ್ರೆಸ್‌ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಬಯಸಿದರೆ ನಾಯಕತ್ವದ ಬದಲಾವಣೆಗೆ ಚುನಾವಣೆ ನಡೆಸಬೇಕು’ ಎಂದು ಆಜಾದ್‌ ಅಭಿಪ್ರಾಯಪಟ್ಟಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು