ಗುರುವಾರ , ಜೂನ್ 24, 2021
21 °C
ವಲಸೆ ಕಾರ್ಮಿಕರಿಂದ ಕೃತ್ಯ– ಆಪ್ತ ಸಮಾಲೋಚನೆ ವೇಳೆ ವಿಷಯ ಬಹಿರಂಗ

ತಿರುವನಂತಪುರ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ- ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ . Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರ: ಉತ್ತರ ಪ್ರದೇಶದ ವಲಸೆ ಕಾರ್ಮಿಕರು ಬಾಲಕಿಯ ಮೇಲೆ ಸತತ ಆರು ತಿಂಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ, ಶಾಹಿದ್‌ (24), ಫರ್ಹಾದ್‌ ಖಾನ್‌ (29), ಹನೀಫ್‌ (28) ಎಂಬುವರನ್ನು ಬಂಧಿಸಲಾಗಿದೆ. ಇತರ ಮೂವರು ಆರೋಪಿಗಳು ಉತ್ತರ ಪ್ರದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಅವರ ಶೋಧಕ್ಕಾಗಿ ಕೊಚ್ಚಿ ಪೊಲೀಸರ ತಂಡ ಶೀಘ್ರವೇ ಉತ್ತರ ಪ್ರದೇಶಕ್ಕೆ ತೆರಳಲಿದೆ.

14 ವರ್ಷದ ಬಾಲಕಿ ಕೊಚ್ಚಿ ನಗರದ ಎಲೂರು ಬಳಿಯ ಅಜ್ಜಿ ಮನೆಯಲ್ಲಿ ತಂಗಿದ್ದಳು. ಆರೋಪಿಗಳು ಆಕೆಯ ಮನೆಯ ಹತ್ತಿರವೇ ನೆಲೆಸಿದ್ದರು ಎನ್ನಲಾಗಿದೆ.

ಕಳೆದ ಮಾರ್ಚ್‌ ತಿಂಗಳ ಲಾಕ್‌ಡೌನ್‌ ಸಮಯದಲ್ಲಿ ಮೊದಲ ಬಾರಿಗೆ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ನಂತರ, ಈ ತಿಂಗಳ ಆರಂಭದವರೆಗೂ ಹಲವು ಸ್ಥಳಗಳಿಗೆ ಕರೆದೊಯ್ದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಆರೋಪಿಗಳು ಬೆದರಿಕೆ ಹಾಕಿದ್ದರಿಂದ ಬಾಲಕಿ ವಿಷಯವನ್ನು ಯಾರ ಬಳಿಯೂ ಹೇಳಿರಲಿಲ್ಲ.

ಶಾಲಾ ಮಕ್ಕಳಿಗಾಗಿ ಇತ್ತೀಚೆಗೆ ನಡೆದ ಆಪ್ತಸಮಾಲೋಚನೆ ಸಂದರ್ಭದಲ್ಲಿ ಬಾಲಕಿ ಈ ವಿಷಯ ಬಹಿರಂಗಪಡಿಸಿದ್ದಾಳೆ. ಆಕೆ ಖಿನ್ನತೆಗೆ ಒಳಗಾಗಿದ್ದಾಳೆ ಎನ್ನಲಾಗಿದೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈಗಾಗಲೇ ಬಂಧನಕ್ಕೊಳಗಾದ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ಈ ಆರೋಪಿಗಳು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಅವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು