ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ 15ರ ಹರೆಯದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ.
ಮೂವರು ವ್ಯಕ್ತಿಗಳು ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಆಕೆ ದುಷ್ಕರ್ಮಿಗಳ ಕೈಯಿಂದ ಬಿಡಿಸಿಕೊಳ್ಳಲು ಯತ್ನಿಸಿದಾಗ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಲಾಗಿದೆ ಎಂದು ಬರೇಲಿ ಎಸ್‌ಎಸ್‌ಪಿ ಶೈಲೇಶ್ ಕುಮಾರ್ ಪಾಂಡೆ ಹೇಳಿದ್ದಾರೆ.
ಒಬ್ಬ ಆರೋಪಿ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಅತ್ಯಾಚಾರದ ಬಗ್ಗೆ ದೂರು ನೀಡಿದರೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದನು ಎಂದು ಪೊಲೀಸರು ಹೇಳಿದ್ದಾರೆ.
ಸಂತ್ರಸ್ತೆಯ ಅಪ್ಪ ನೀಡಿದ ದೂರಿನ ಮೇರೆಗೆ ಆರೋಪಿಗಳಾದಮೋಹಿತ್ (25), ಸುಮಿತ್(27) ಮತ್ತು ಅಂಕಿತ್ (24) ಎಂಬವರ ವಿರುದ್ಧ ಕೇಸು ದಾಖಲಿಸಲಾಗಿದೆ.
ಮೋಹಿತ್ ಮತ್ತು ಸುಮಿತ್‌ನ್ನು ಬುಧವಾರ ಬಂಧಿಸಿದ್ದು, ಅಂಕಿತ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.