ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆಯ ಭಯ: ಲೈಂಗಿಕ ಕಿರುಕುಳದ ಸುಳ್ಳು ಕಥೆ ಸೃಷ್ಟಿಸಿದ ಬಾಲಕಿ!

Last Updated 20 ಮಾರ್ಚ್ 2023, 11:53 IST
ಅಕ್ಷರ ಗಾತ್ರ

ನವದೆಹಲಿ: 14 ವರ್ಷದ ಬಾಲಕಿಯೊಬ್ಬಳು ಪರೀಕ್ಷೆಯನ್ನು ಸರಿಯಾಗಿ ಬರೆಯದಿದ್ದ ಕಾರಣ ಬ್ಲೇಡ್‌ನಿಂದ ತನಗೆ ತಾನೇ ಹಾನಿ ಮಾಡಿಕೊಂಡು, ಲೈಂಗಿಕ ಕಿರುಕುಳದ ಸುಳ್ಳು ಕಥೆ ಸೃಷ್ಠಿ ಮಾಡಿರುವ ಘಟನೆ ಇಲ್ಲಿನ ಭಜನ್‌ಪುರ ನಡೆದಿದೆ.

ಪೋಷಕರ ಬೈಗುಳದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಶಾಲೆಯ ಅವಧಿ ಮುಗಿದ ನಂತರ ಹುಡುಗರು ನನ್ನನ್ನು ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಹೇಳಿದ್ದಳು. ಆದರೆ ಆಕೆ ಪರೀಕ್ಷೆಯಲ್ಲಿ ಸರಿಯಾಗಿ ಬರೆಯದ ಕಾರಣ ಸುಳ್ಳು ಕಥೆ ಸೃಷ್ಟಿಸಿದ್ದಳು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದರು. ಈ ವೇಳೆ ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ಕ್ಯಾಮರಾಗಳನ್ನು ಪರೀಶಿಲಿಸಿದಾಗ ಆಕೆ ಒಬ್ಬಳೇ ರಸ್ತೆ ಬದಿಯಲ್ಲಿ ಕುಳಿತು, ಬ್ಲೇಡ್‌ನಿಂದ ತನಗೆ ತಾನೇ ಹಾನಿ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಮಹಿಳಾ ಪೊಲೀಸರು ಆಕೆಯನ್ನು ವಿಚಾರಿಸಿದಾಗ ಸತ್ಯವನ್ನು ಬಹಿರಂಗ ಪಡಿಸಿದ್ದಾಳೆ ಎಂದು ಪೊಲೀಸ್ ಉಪ ಆಯುಕ್ತ ಜಾಯ್ ಟಿರ್ಕಿ ಮಾಹಿತಿ ನೀಡಿದ್ದಾರೆ.

ಪೋಕ್ಸೋ ಕಾಯಿದೆಯಡಿ ದಾಖಲಿಸಿಕೊಂಡಿದ್ದ ಪ್ರಕರಣವನ್ನು ರದ್ದುಗೊಳಿಸಲಾಗಿದೆ ಎಂದು ಡಿಸಿಪಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT