ಶುಕ್ರವಾರ, ಮಾರ್ಚ್ 24, 2023
27 °C

ಜಾಧವ್‌ಗೆ ವಕೀಲರ ನೇಮಕ: ಮತ್ತೊಂದು ಅವಕಾಶಕ್ಕೆ ಪಾಕ್‌ ನ್ಯಾಯಾಲಯ ನಿರ್ದೇಶನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ಗೂಢಚಾರಿಕೆ ಆರೋಪದಲ್ಲಿ ಬಂಧನಕ್ಕೊಳಗಾಗಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್‌ ಜಾಧವ್‌ಗೆ, ವಕೀಲರನ್ನು ನೇಮಕಗೊಳಿಸುವುದಕ್ಕೆ ಭಾರತಕ್ಕೆ ಮತ್ತೊಂದು ಅವಕಾಶ ನೀಡಬೇಕು ಎಂದು ಪಾಕಿಸ್ತಾನ ಸರ್ಕಾರಕ್ಕೆ ಇಲ್ಲಿನ ಹೈಕೋರ್ಟ್ ನಿರ್ದೇಶಿಸಿದೆ.

ಪಾಕಿಸ್ತಾನ ಸೇನಾ ನ್ಯಾಯಾಲಯ ನೀಡಿರುವ ಮರಣ ದಂಡನೆ ಶಿಕ್ಷೆ ತೀರ್ಪು ಪುನರ್‌ಪರಿಶೀಲನೆ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್‌ ಈ ನಿರ್ದೇಶನ ನೀಡಿದೆ. ‘ಜಾಧವ್‌ ಅವರಿಗೆ ವಕೀಲರ ನೇಮಕ ಕುರಿತ ಪಾಕಿಸ್ತಾನದ ಪ್ರಸ್ತಾಪಕ್ಕೆ ಭಾರತ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಂತರರಾಷ್ಟ್ರೀಯ ನ್ಯಾಯಾಲಯದ ತೀರ್ಪಿಗೆ ಅನುಗುಣವಾಗಿ ಪಾಕಿಸ್ತಾನವು, ಜಾಧವ್‌ ಅವರಿಗೆ ಕಾನ್ಸುಲರ್‌ ಸಂಪರ್ಕವನ್ನೂ ಒದಗಿಸಿದೆ’ ಎಂದು ಅಟರ್ನಿ ಜನರಲ್‌ ಖಾಲಿದ್‌ ಜಾವೇದ್‌ ಖಾನ್‌ ನ್ಯಾಯಾಲಯಕ್ಕೆ ತಿಳಿಸಿದರು. 

ಇದಕ್ಕೆ ಪ್ರತಿಕ್ರಿಯೆಯಾಗಿ, ‘ಜಾಧವ್‌ ಅವರ ಕುರಿತ ಆದೇಶಗಳನ್ನು ಭಾರತಕ್ಕೆ ಕಳುಹಿಸಿ’ ಎಂದು ಸರ್ಕಾರಕ್ಕೆ ಆದೇಶಿಸಿದ ನ್ಯಾಯಾಲಯವು, ವಿಚಾರಣೆಯನ್ನು ಅಕ್ಟೋಬರ್‌ 3ಕ್ಕೆ ಮುಂದೂಡಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು