ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಣಜಿ ಕ್ಷೇತ್ರದಲ್ಲಿ ಸೋಲನುಭವಿಸಿದ ಉತ್ಪಲ್ ಪರ್ರಿಕರ್

Last Updated 10 ಮಾರ್ಚ್ 2022, 8:32 IST
ಅಕ್ಷರ ಗಾತ್ರ

ಪಣಜಿ: ಗೋವಾದ ಪಣಜಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಿಎಂ ಮನೋಹರ್ ಪರ್ರಿಕರ್ ಅವರ ಪುತ್ರ ಉತ್ಪಲ್ ಪರ್ರಿಕರ್ ಸೋಲನುಭವಿಸಿದ್ದಾರೆ.

ಗೆಲುವಿಗಾಗಿ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇನೆ. ಉತ್ತಮ ಪೈ‍ಪೋಟಿ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ. ಸೋಲಿನ ಬಳಿಕ ಮತ್ತೆ ಬಿಜೆಪಿಯತ್ತ ಮುಖ ಮಾಡುವಿರಾ? ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ಪಲ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇಲ್ಲಿ ಬಿಜೆಪಿ ಅಭ್ಯರ್ಥಿ ಅಟನಾಸಿಯೊ ಬಾಬುಶ್ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಪರ್ರಿಕರ್ ಅವರ ಮಗ ಉತ್ಪಲ್‌ ಅವರು ತಮ್ಮ ತಂದೆ ಪ್ರತಿನಿಧಿಸುತ್ತಿದ್ದ ಪಣಜಿ ಕ್ಷೇತ್ರದಿಂದಬಿಜೆಪಿಯಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷವು ಅಲ್ಲಿ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸರ್ಧಿಸಿದ್ದರು. ಮನೋಹರ್‌ ಪರ್ರಿಕರ್‌ ಅವರು 1994ರಿಂದ 2019ರ ಮಾರ್ಚ್‌ ವರೆಗೂ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT