ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ: ಬೀಚ್‌ನಲ್ಲಿ ದೋಣಿಗಳಿಗೆ ಬೆಂಕಿ, ವ್ಯಕ್ತಿ ಬಂಧನ

Last Updated 15 ಮಾರ್ಚ್ 2023, 10:43 IST
ಅಕ್ಷರ ಗಾತ್ರ

ಪಣಜಿ: ಬೆನೌಲಿಮ್ ಬೀಚ್‌ನಲ್ಲಿ ಎರಡು ದೋಣಿಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೆಬ್ರುವರಿ 25ರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಆರೋಪಿಯನ್ನು ರೊಫಿಲಿಯೊ ಫೆರ್ನಾಂಡಿಸ್ ಎಂದು ಗುರುತಿಸಲಾಗಿ‌ದ್ದು, ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

‘ಈ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಆರೋಪಿಯು ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಆದರೆ ವಿಚಾರಣೆಯ ನಂತರವೇ ಆರೋ‍ಪಿಯ ಉದ್ದೇಶ ತಿಳಿದುಕೊಳ್ಳಲು ಸಾಧ್ಯ’ ಎಂದು ಪೊಲೀಸರು ತಿಳಿಸಿದ್ದಾರೆ.

ಬೆನೌಲಿಮ್ ಬೀಚ್‌ನಲ್ಲಿ ನಿಲ್ಲಿಸಿದ್ದ ತನ್ನ ಎರಡು ದೋಣಿಗಳಿಗೆ ಯಾರೋ ಬೆಂಕಿ ಹಚ್ಚಿದ್ದಾರೆ ಎಂದು ಫೆರ್ನಾಂಡಿಸ್ ಪೊಲೀಸರಿಗೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT