ಮಂಗಳವಾರ, ನವೆಂಬರ್ 30, 2021
21 °C

ಗೋವಾ ಸಿಎಂ ಪ್ರಮೋದ್ ಸಾವಂತ್‌ಗೆ ಕೋವಿಡ್‌–19 ದೃಢ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ಪಣಜಿ: ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್(47) ಬುಧವಾರ ಬೆಳಿಗ್ಗೆ ಟ್ವೀಟ್‌ ಮಾಡಿದ್ದಾರೆ.

ಕೋವಿಡ್‌ ರೋಗ ಲಕ್ಷಣಗಳು ಕಂಡು ಬಂದಿರದ ಕಾರಣ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ನಿರ್ಧರಿಸಿದ್ದಾರೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದಿದ್ದವರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸಲಹೆ ಮಾಡಿದ್ದಾರೆ.

'ನನಗೆ ಕೋವಿಡ್–19 ಪಾಸಿಟಿವ್‌ ಇರುವುದು ಪತ್ತೆಯಾಗಿದೆ. ನನಗೆ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ, ಹಾಗಾಗಿ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ನಿರ್ಧರಿಸಿದ್ದೇನೆ. ಮನೆಯಿಂದಲೇ ನನ್ನ ಕಾರ್ಯಾಚರಣೆಗಳನ್ನು ಮುಂದುವರಿಸುತ್ತೇನೆ. ನನ್ನೊಂದಿಗೆ ಸಮೀಪ ಸಂಪರ್ಕಕ್ಕೆ ಬಂದಿದ್ದವರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ' ಎಂದು ಸಿಎಂ ಪ್ರಮೋದ್ ಸಾವಂತ್‌ ಟ್ವೀಟಿಸಿದ್ದಾರೆ.

ಪ್ರಮೋದ್ ಸಾವಂತ್‌ ಅವರು ಮಂಗಳವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಕೋವಿಡ್‌–19 ಆರೈಕೆ ಕೇಂದ್ರಗಳ ಹೊಣೆ ಹೊತ್ತಿರುವ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾರ್ಯಾಚರಣೆ ಪರೀಶೀಲನೆ ನಡೆಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು