ಬುಧವಾರ, ಮಾರ್ಚ್ 29, 2023
26 °C

ರೈಲುಗಳಲ್ಲಿ ವೈ-ಫೈ ಸೌಲಭ್ಯ ಕಲ್ಪಿಸುವಂತೆ ಕೇಂದ್ರಕ್ಕೆ ಪತ್ರ: ಗೋವಾ ಸಿಎಂ

ಪಿಟಿಐ Updated:

ಅಕ್ಷರ ಗಾತ್ರ : | |

ಪಣಜಿ: ರೈಲು ಬೋಗಿಗಳಲ್ಲಿ ವೈ-ಫೈ ಸೌಲಭ್ಯ ಕಲ್ಪಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆಯುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. 

ಕರ್ನಾಟಕದ ಮಂಗಳೂರಿನಿಂದ ಗೋವಾಗೆ ನೇತ್ರಾವತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಇಲ್ಲಿಗೆ ಆಗಮಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ಸಾವಂತ್‌ ಅವರು ಮಂಗಳೂರಿನಲ್ಲಿ ನಡೆದ ಕೊಂಕಣಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಾನು ರೈಲಿನಲ್ಲಿ ಪ್ರಯಾಣ ಮಾಡುವ ಸಂದರ್ಭದಲ್ಲಿ ಒಂದೆರಡು ಸಮಸ್ಯೆಗಳನ್ನು ಗಮನಿಸಿದೆ, ಮುಖ್ಯವಾಗಿ ರೈಲಿನಲ್ಲಿ ವೈ–ಫೈ ಸಂಪರ್ಕ ಇರಬೇಕು. ಬೋಗಿಗಳಲ್ಲಿ ವೈ-ಫೈ ಸೌಲಭ್ಯ ಕಲ್ಪಿಸುವಂತೆ ರೈಲ್ವೆ ಸಚಿವರಿಗೆ ಪತ್ರ ಬರೆಯುವುದಾಗಿ ಅವರು ಹೇಳಿದರು. 

ಗೋವಾ ಮತ್ತು ಮಂಗಳೂರು ನಡುವಿನ ರೈಲು ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸಬೇಕು. ಮುಂಬೈ ಹಾಗೂ ಮಂಗಳೂರು ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಗೋವಾಗೂ ವಿಸ್ತರಿಸಬೇಕು ಎಂದರು. ಮಂಗಳೂರು ಹಾಗೂ ಗೋವಾದ ಮೋಪಾದಲ್ಲಿರುವ ಮನೋಹರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ವಿಮಾನ ಸಂಪರ್ಕ ಆರಂಭಿಸಬೇಕು ಎಂದು ತಿಳಿಸಿದರು.

ಮಂಗಳೂರು ಮತ್ತು ಗೋವಾ ನಡುವಿನ ಸಂಪರ್ಕ, ಉಭಯ ರಾಜ್ಯಗಳ ನಡುವಿನ ಪ್ರವಾಸೋದ್ಯಮ ಮತ್ತು ವ್ಯಾಪಾರಕ್ಕೆ ಸಹಾಯವಾಗುತ್ತದೆ ಎಂದು ಸಾವಂತ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು