ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ ಕೈ ಶಾಸಕರು ಬಿಜೆಪಿಗೆ ಸೇರ್ಪಡೆ: ಇದು ‘ಆಪರೇಷನ್ ಕೆಸರು’ ಎಂದ ಕಾಂಗ್ರೆಸ್

Last Updated 14 ಸೆಪ್ಟೆಂಬರ್ 2022, 19:57 IST
ಅಕ್ಷರ ಗಾತ್ರ

ಪಣಜಿ: ಗೋವಾದಲ್ಲಿ ಎಂಟು ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿರುವ ವಿಚಾರವೀಗ ರಾಷ್ಟ್ರ ರಾಜಕಾರಣದಲ್ಲಿ ಆರೋಪ– ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಬಿಜೆಪಿ ಮಾಡುತ್ತಿರುವುದು ‘ಆಪರೇಷನ್‌ ಕೆಸರು’ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್‌ ರಮೇಶ್‌, ‘ಭಾರತ್‌ ಜೋಡೊ ಯಾತ್ರೆಯ ಯಶಸ್ಸು ಗೋಚರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೋವಾದಲ್ಲಿ ಆಪರೇಷನ್‌ ಕೆಸರನ್ನು ವೇಗವಾಗಿ ಅನುಷ್ಠಾನಗೊಳಿಸಲಾಗಿದೆ’ ಎಂದು ಆರೋಪಿಸಿದ್ದಾರೆ.

‘ಬಿಜೆಪಿ ಆತಂಕದಲ್ಲಿದೆ. ಯಾತ್ರೆಯನ್ನು ದುರ್ಬಲಗೊಳಿಸಲು ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ. ನಾವು ನಿರಾತಂಕವಾಗಿ ಇದ್ದೇವೆ. ಬಿಜೆಪಿಯ ಈ ಕೊಳಕು ತಂತ್ರಗಳ ವಿರುದ್ಧ ನಾವು ಜಯ ಸಾಧಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಗೋವಾದ ಎಂಟು ಕಾಂಗ್ರೆಸ್ ಶಾಸಕರು ಬುಧವಾರ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಉಪಸ್ಥಿತಿಯಲ್ಲಿ ಬಿಜೆಪಿ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT