ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮ್ಮ ಪಕ್ಷವನ್ನೇ ಬಿಜೆಪಿ ಜೊತೆ ವಿಲೀನಗೊಳಿಸಲು ಮುಂದಾದ ಗೋವಾ ಕಾಂಗ್ರೆಸ್ ಶಾಸಕರು!

Last Updated 14 ಸೆಪ್ಟೆಂಬರ್ 2022, 9:18 IST
ಅಕ್ಷರ ಗಾತ್ರ

ಪಣಜಿ: ಪಕ್ಷಾಂತರಕ್ಕೆ ಹೆಸರಾಗಿರುವ ಗೋವಾ ಶಾಸಕರು ಮತ್ತೆ ಪಕ್ಷಾಂತರ ಆಟವನ್ನು ಪ್ರಾರಂಭಿಸಿದ್ದಾರೆ. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಕಾಂಗ್ರೆಸ್ ಶಾಸಕರು ತಮ್ಮ ಪಕ್ಷವನ್ನು ವಿಧಾನಸಭೆಯಲ್ಲಿಬಿಜೆಪಿಯೊಂದಿಗೆ ವಿಲೀನಗೊಳಿಸಬೇಕು ಎಂಬ ನಿರ್ಣಯವನ್ನೇ ಕೈಗೊಂಡಿದ್ದಾರೆ.

8 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಗೋವಾ ಬಿಜೆಪಿ ಅಧ್ಯಕ್ಷ ಸದಾನಂದ ತನವಡೆಹೇಳಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕರು ನಿರ್ಣಯ ಅಂಗೀಕಾರ ಬೆಳಕಿಗೆ ಬಂದಿದೆ.

ವಿರೋಧ ಪಕ್ಷದ ನಾಯಕ ಮೈಕಲ್ ಲೋಬೊ ಅವರು ಇತರ ಏಳು ಶಾಸಕರ ಜೊತೆ ಈ ನಿಲುವಳಿ ಸೂಚನೆ ಮಂಡಿಸಿದ್ದಾರೆ. ಶಾಸಕ ದಿಗಂಬರ್ ಕಾಮತ್ ಇದನ್ನು ಅಂಗೀಕರಿಸಿದ್ದಾರೆ. ಇದಕ್ಕೂ ಮುನ್ನ ಈ ಎಂಟು ಶಾಸಕರು ಸಿಎಂ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದರು.

40 ಶಾಸಕ ಸದಸ್ಯತ್ವ ಬಲದ ಗೋವಾ ವಿಧಾನಸಭೆಯಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ 20, ಕಾಂಗ್ರೆಸ್ 11 ಸ್ಥಾನಗಳನ್ನು ಗೆದ್ದಿತ್ತು.2019 ರಲ್ಲೂ ಕೂಡ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಜಿಗಿದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT