ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ: ಬಿಜೆಪಿಗೆ ಸೇರಿದ 8 ಶಾಸಕರ ವಿರುದ್ಧ ಕಾಂಗ್ರೆಸ್ ಅನರ್ಹತೆ ಅರ್ಜಿ

Last Updated 1 ನವೆಂಬರ್ 2022, 13:49 IST
ಅಕ್ಷರ ಗಾತ್ರ

ಪಣಜಿ: ಇತ್ತೀಚೆಗಷ್ಟೇ ಬಿಜೆಪಿಗೆ ಸೇರಿದ ಕಾಂಗ್ರೆಸ್‌ನ 8 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸುವುದಾಗಿ ಗೋವಾ ಕಾಂಗ್ರೆಸ್ ಘಟಕ ಮಂಗಳವಾರ ಹೇಳಿದೆ.

ಅನರ್ಹತೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸ್ಪೀಕರ್ ಅವರ ಕಚೇರಿಯಿಂದ ಪಕ್ಷವು ಪಡೆದುಕೊಂಡಿದೆ ಎಂದು ಗೋವಾ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಪಾಟ್ಕರ್ ತಿಳಿಸಿದ್ದಾರೆ.

ಮಾಜಿ ಅಡ್ವೊಕೇಟ್ ಜನರಲ್ ಮತ್ತು ಕಾಂಗ್ರೆಸ್ ಶಾಸಕ ಕಾರ್ಲೋಸ್ ಅಲ್ವಾರೆಸ್ ಫೆರೇರಾ ಅವರು ಅರ್ಜಿಯ ಕರಡನ್ನು ರಚಿಸಲಿದ್ದು,ಅದನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು ಎಂದೂ ಪಾಟ್ಕರ್ ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಕಾಂಗ್ರೆಸ್‌ನ 11 ಶಾಸಕರ ಪೈಕಿ 8 ಶಾಸಕರು ಬಿಜೆಪಿಗೆ ಸೇರಿದ ಬಳಿಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಮೂರಕ್ಕೆ ಕುಸಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT