ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತ ತೇಜ್‌ಪಾಲ್‌ ಪ್ರಕರಣದ ತೀರ್ಪು ಮೇ 12ಕ್ಕೆ ಪ್ರಕಟ: ಗೋವಾ ನ್ಯಾಯಾಲಯ

ತೆಹಲ್ಕಾ ಪತ್ರಿಕೆಯ ಮಾಜಿ ಪ್ರಧಾನ ಸಂಪಾದಕರ ಲೈಂಗಿಕ ದೌರ್ಜನ್ಯ ಪ್ರಕರಣ
Last Updated 27 ಏಪ್ರಿಲ್ 2021, 7:07 IST
ಅಕ್ಷರ ಗಾತ್ರ

ಪಣಜಿ: ‘ತೆಹೆಲ್ಕಾ’ ಪತ್ರಿಕೆಯ ಮಾಜಿ ಪ್ರಧಾನ ಸಂಪಾದಕ ತರುಣ್‌ ತೇಜ್‌ಪಾಲ್‌ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪನ್ನು ಮೇ 12ರಂದು ಪ್ರಕಟಿಸುವುದಾಗಿ ಗೋವಾ ಸೆಷನ್ಸ್ ನ್ಯಾಯಾಲಯ ತಿಳಿಸಿದೆ.

ಈ ಮೊದಲು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಬೇಕಿತ್ತು. ನ್ಯಾಯಾಧೀಶೆ ಕ್ಷಮಾ ಜೋಶಿ ತೀರ್ಪನ್ನು ಮೇ 12 ಕ್ಕೆ ಪ್ರಕಟಿಸುವುದಾಗಿ ಹೇಳಿದರು.

ಸರ್ಕಾರದ ಪರ ವಕೀಲ ಫ್ರಾನ್ಸಿಸ್ಕೊ ಟವರೆಸ್‌ ‘ಯಾವ ಕಾರಣವನ್ನೂ ನೀಡದೇ ನ್ಯಾಯಾಧೀಶರು ತೀರ್ಪನ್ನು ಮುಂದೂಡಿದ್ದಾರೆ‘ ಎಂದು ತಿಳಿಸಿದರು.

2013ರಲ್ಲಿ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿದ್ದಾರೆ ಎಂದು ತೇಜ್‌ಪಾಲ್‌ ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ಕಳೆದ ಮಾರ್ಚ್‌ನಲ್ಲಿ ಮುಕ್ತಾಯಗೊಂಡಿದ್ದು, ತೀರ್ಪನ್ನು ಏಪ್ರಿಲ್‌ 27ಕ್ಕೆ ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿತ್ತು.

ಏನಿದು ಪ್ರಕರಣ?
ತೆಹಲ್ಕಾದ ಸಂಸ್ಥಾಪಕ -ಸಂಪಾದಕ ತರುಣ್ ತೇಜ್‌ಪಾಲ್ 2013ರಲ್ಲಿ ಥಿಂಕ್ ಫೆಸ್ಟ್ ಕಾರ್ಯಕ್ರಮದ ವೇಳೆ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಅದೇ ಸಂಸ್ಥೆಯ ಕಿರಿಯ ಸಹೋದ್ಯೋಗಿಯೊಬ್ಬರು ಆರೋಪಿಸಿದ್ದರು. ಪಂಚತಾರಾ ಹೋಟೆಲ್‌ನ ಲಿಫ್ಟ್‌ನಲ್ಲಿ ತರುಣ್ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಸಂತ್ರಸ್ತೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT