ಭಾನುವಾರ, ಜೂನ್ 20, 2021
28 °C

ತರುಣ್‌ ತೇಜ್‌ಪಾಲ್‌ ಪ್ರಕರಣ: ಇದೇ 21ಕ್ಕೆ ತೀರ್ಪು ಪ್ರಕಟ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಣಜಿ: ತೆಹಲ್ಕಾದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತೀರ್ಪನ್ನು ಇದೇ 21ರಂದು ಪ್ರಕಟಿಸುವುದಾಗಿ ಗೋವಾದ ಸೆಷನ್ಸ್ ನ್ಯಾಯಾಲಯವು ಬುಧವಾರ ಹೇಳಿದೆ.

ಈ ವೇಳೆ ತರುಣ್‌ ತೇಜ್‌ಪಾಲ್‌ ತಮ್ಮ ಕುಟುಂಬದ ಕೆಲವು ಸದಸ್ಯರು ಮತ್ತು ವಕೀಲರೊಂದಿಗೆ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರು.

ವಿದ್ಯುತ್‌ ವೈಫಲ್ಯದಿಂದಾಗಿ ತೀ‍ರ್ಪು ನೀಡಲು ಸಾಧ್ಯವಾಗಿಲ್ಲ ಎಂದು ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ ನ್ಯಾಯಧೀಶೆ ಕ್ಷಮಾ ಜೋಶಿ ಹೇಳಿರುವುದಾಗಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಫ್ರಾನ್ಸಿಸ್ ತವೋರಾ ಅವರು ಸುದ್ದಿಗಾರರಿಗೆ ತಿಳಿಸಿದರು.

‘ತೌತೆ’ ಚಂಡಮಾರುತದಿಂದಾಗಿ ಗೋವಾದ ಹಲವೆಡೆ ಭಾನುವಾರದಿಂದ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಈ ಪ್ರಕರಣ ಸಂಬಂಧ ಮೂರನೇ ಬಾರಿ ನ್ಯಾಯಾಲಯವು ತೀರ್ಪನ್ನು ಮಂದೂಡಿದೆ.

 ಪ್ರಕರಣದ ಕುರಿತು ಏಪ್ರಿಲ್ 27ರಂದು ತೀರ್ಪು ಪ್ರಕಟಿಸಬೇಕಿತ್ತು. ಆದರೆ ನ್ಯಾಯಾಧೀಶರು ತೀರ್ಪು ನೀಡುವ ದಿನಾಂಕವನ್ನು ಮೇ 12ಕ್ಕೆ ಮುಂದೂಡಿದ್ದರು. ಬಳಿಕ ಈ ದಿನಾಂಕವನ್ನು ಮೇ 19ಕ್ಕೆ ನಿಗದಿ ಮಾಡಲಾಗಿತ್ತು.

2013ರಲ್ಲಿ ಗೋವಾದ ಐಷಾರಾಮಿ ಹೋಟೆಲ್‌ನ ಲಿಫ್ಟ್‌ನೊಳಗೆ ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವನ್ನು ತರುಣ್ ಎದುರಿಸುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು