ಶುಕ್ರವಾರ, ಡಿಸೆಂಬರ್ 3, 2021
20 °C

ಮಮತಾ ’ದುರ್ಗೆ’, ಬಿಜೆಪಿ ‘ಭಸ್ಮಾಸುರ’: ಗೋವಾ ನಾಯಕನ ಬಣ್ಣನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಣಜಿ (ಪಿಟಿಐ): ‘ಪಶ್ಚಿಮ ಬಂಗಾಳ ಮುಖ್ಯಮಂತ್ರಿ ‘ದುರ್ಗೆ’ ಹಾಗೂ ಬಿಜೆಪಿ ಸರ್ಕಾರ ‘ಭಸ್ಮಾಸುರ’ ಇದ್ದಂತೆ. ಕರಾವಳಿ ರಾಜ್ಯದಿಂದ ಭಸ್ಮಾಸುರನ ನಿರ್ಮೂಲನೆ ಮಾಡುವುದು ಖಚಿತ ಎಂದು ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ನಾಯಕ ಕಿರಣ್‌ ಖಂಡೋಲ್ಕರ್‌ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಿರ್ಮೂಲನೆ ಮಾಡಲು ಪಶ್ಚಿಮ ಬಂಗಾಳದಿಂದ ದುರ್ಗೆಯನ್ನು ಕರೆತರುವುದು ಅನಿವಾರ್ಯವಾಗಿದೆ. ಮುಂದಿನ ಚುನಾವಣೆಯಲ್ಲಿ ಟಿಎಂಸಿ ಜೊತೆಗೆ ಮೈತ್ರಿ ಹೊಂದುವ ಕುರಿತು ಮಾತುಕತೆ ನಡೆದಿದೆ ಎಂದು ಅವರು ಹೇಳಿದರು.

ಈ ಮಾತಿಗೆ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ‘ನೀವು ಶಾಂತದುರ್ಗೆಯನ್ನು ಮನುಷ್ಯರ ಜೊತೆಗೆ, ಅದು ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ನಂತರ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರಿಗೆ ಹೋಲಿಕೆ ಮಾಡಲಾಗದು’ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಹೆಸರು ಉಲ್ಲೇಖಿಸದೇ, ‘ಇಂಥ ಹೋಲಿಕೆಯನ್ನು ಗೋವಾದ ಜನರು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ನಂತರ ಅವರು ಹೇಗೆ ನಡೆದುಕೊಂಡಿದ್ದಾರೆ ಎಂಬುದು ಗೊತ್ತಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು