ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ: ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಸಚಿವ

Last Updated 21 ಜನವರಿ 2022, 9:42 IST
ಅಕ್ಷರ ಗಾತ್ರ

ಪಣಜಿ:ಸಂವೋರ್ಡೆಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಒಂದು ದಿನದ ನಂತರ ಗೋವಾದ ಲೋಕೋಪಯೋಗಿ ಇಲಾಖೆ ಸಚಿವ ದೀಪಕ್ ಪ್ರಭು ಪೌಸ್ಕರ್ ಶುಕ್ರವಾರ ಸಚಿವ ಹಾಗೂ ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

2019 ರಲ್ಲಿ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಪೌಸ್ಕರ್, ತಮ್ಮ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

'ನಾನು ಇಂದು ಶಾಸಕ ಹಾಗೂ ಸಚಿವ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ... ನನ್ನ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿದ ನಂತರ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನಾನು ಸಂವೋರ್ಡೆಮ್‌ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ' ಎಂದು ಪೌಸ್ಕರ್ ಹೇಳಿದ್ದಾರೆ.

ಗುರುವಾರ 34 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಬಿಜೆಪಿ, ಮಾಜಿ ಶಾಸಕ ಗಣೇಶ್ ಗಾಂವ್ಕರ್ ಅವರಿಗೆ ಸಂವೋರ್ಡೆಮ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT