ಮಂಗಳವಾರ, ಜನವರಿ 26, 2021
24 °C

ಅಗುವಾಡ ಜೈಲು, ಪ್ರವಾಸಿ ತಾಣವಾಗಿ ಮಾರ್ಪಾಡು: ಗೋವಾ ಸಿಎಂ ಪ್ರಮೋದ್‌ ಸಾವಂತ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಣಜಿ: ಐತಿಹಾಸಿಕ ಅಗುವಾಡ ಜೈಲನ್ನು ಪ್ರವಾಸಿತಾಣವಾಗಿ ನವೀಕರಿಸಲಾಗುವುದು. ಇದರ ಅಭಿವೃದ್ಧಿ ಕಾರ್ಯ ಮಾರ್ಚ್‌ನಲ್ಲಿ ಪೂರ್ಣಗೊಳ್ಳಲಿದ್ದು, ಬಳಿಕ ಇದನ್ನು ಪ್ರವಾಸಿಗರಿಗಾಗಿ ತೆರೆಯಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ತಿಳಿಸಿದರು.

17ನೇ ಶತಮಾನದ ಅಗುವಾಡ ಜೈಲಿನ ನವೀಕರಣಕ್ಕೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿ ಮಾತನಾಡಿದ ಅವರು, ‘ಈ ಯೋಜನೆಯ ಶೇ 90 ರಷ್ಟು ಕೆಲಸಗಳು ಪೂರ್ಣಗೊಂಡಿವೆ’ ಎಂದರು.

‘ಜೈಲಿನ ಎರಡು ಪ್ರಮುಖ ಕೋಣೆಗಳನ್ನು ಸ್ವಾತಂತ್ರ್ಯ ಹೋರಾಟಗಾರ ಟಿ.ಬಿ.ಕುನ್ಹಾ ಮತ್ತು ರಾಮ್ ಮನೋಹರ್ ಲೋಹಿಯಾ ಅವರಿಗೆ ಸಮರ್ಪಿಸಲಾಗುವುದು’ ಎಂದು ಅವರು ತಿಳಿಸಿದರು.

‘ಅಗುವಾಡ ಕೋಟೆಯನ್ನು ರಾಜ್ಯದ ವಿಮೋಚನಾ ಹೋರಾಟದ ಕುರಿತಾದ ವಸ್ತುಸಂಗ್ರಹಾಲಯವಾಗಿ ಮಾರ್ಪಡಿಸಲಾಗುವುದು’ ಎಂದು ಅವರು ಮಾಹಿತಿ ನೀಡಿದರು.

ಕೇಂದ್ರ ಸರ್ಕಾರದ ‘ಸ್ವದೇಶ ದರ್ಶನ ಯೋಜನೆ’ಯಡಿ ಅಂದಾಜು ₹22 ಕೋಟಿ ವೆಚ್ಚದಲ್ಲಿ ಅಗುವಾಡ ಕೋಟೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಗೋವಾ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಜಿಟಿಡಿಸಿ) ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು