ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಗೆ ಬಂದ‌ ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ

Last Updated 29 ಜೂನ್ 2021, 9:57 IST
ಅಕ್ಷರ ಗಾತ್ರ

ನವದೆಹಲಿ: ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮಂಗಳವಾರ ದೆಹಲಿಗೆ ಬಂದಿದ್ದಾರೆ. ರಾಜ್ಯ ರಾಜಕಾರಣದಲ್ಲಿನ ಅನೇಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇವರ ದಿಢೀರ್‌ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ‌ ಸಲ್ಲಿಸುವುದಾಗಿ ಹೇಳಿದ್ದ ಅವರು, ಮಂಗಳವಾರ‌ ಬೆಳಿಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು.

'ನಾನು ಯಾರನ್ನು ಭೇಟಿ ಆಗುವೆ ಅನ್ನೋದು ಒಂದು ಅಥವಾ ಎರಡು ಗಂಟೆಯಲ್ಲಿ ಗೊತ್ತಾಗಲಿದೆ. ನಾನು ಈ ಸಂಬಂಧ ವೀಡಿಯೊ ಬಿಡುಗಡೆ ಮಾಡುತ್ತೇನೆ' ಎಂದು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ಸುದ್ದಿಗಾರರಿಗೆ ತಿಳಿಸಿದರು.

'ನಿನ್ನೆ ರಾತ್ರಿ 2 ಗಂಟೆಗೆ ನನಗೆ ದೆಹಲಿಯ ಒಬ್ಬರಿಂದ ಕರೆ‌ ಬಂದಿದೆ. ಅವರ ಆಹ್ವಾನದ ಮೇರೆಗೆ ಇಲ್ಲಿಗೆ ಬಂದಿದ್ದೇ‌ನೆ. ಭೇಟಿಯ ನಂತರ ಫೋಟೊ, ವಿಡಿಯೊವನ್ನು ನಾನೇ ಕೊಡುತ್ತೇನೆ' ಎಂದು ಅವರು ಹೇಳಿದರು.

'ಬಿಜೆಪಿಗೆ ನಾನು ರಾಜೀನಾಮೆ‌ ನೀಡುವ‌ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ನನಗೆ ಅನ್ಯಾಯ ಆಗಿಲ್ಲ. ಪಕ್ಷದಲ್ಲಿ ಇರುವ ಮೂವರು ನನ್ನ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸುವೆ' ಎಂದು ಅವರು ಹೆಸರು ಬಹಿರಂಗ ಪಡಿಸದೇ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT