ಬುಧವಾರ, ಜೂನ್ 16, 2021
23 °C

ಚಿನ್ನ ಅಕ್ರಮ ಸಾಗಣೆ ಪ್ರಕರಣ: ಸ್ವಪ್ನಾ ಸುರೇಶ್ ಜಾಮೀನು ಅರ್ಜಿ ವಜಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ಚಿನ್ನ ಅಕ್ರಮ ಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

’ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಆರೋಪಿಯು ಜಾರಿ ನಿರ್ದೇಶನಾಲಯದ ಎದುರು ಒಪ್ಪಿಕೊಂಡಿದ್ದಾಗಿ’ ಅರ್ಜಿ ವಜಾಗೊಳಿಸಿರುವ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಹೇಳಿದೆ.

ರಾಜತಾಂತ್ರಿಕ ಮಾರ್ಗವನ್ನು ದುರುಪಯೋಗ ಮಾಡಿಕೊಂಡ ಆರೋಪದ ಅಡಿ ಸ್ವಪ್ನಾ ಸುರೇಶ್ ಮತ್ತಿತರರನ್ನು ರಾಷ್ಟ್ರೀಯ ತನಿಖಾ ದಳದವರು ಬಂಧಿಸಿದ್ದರು. ಜಾರಿ ನಿರ್ದೇಶನಾಲಯ ಇವರ ವಿರುದ್ಧ ಪ್ರಕರಣ ದಾಖಲಿಸಿತ್ತು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು