ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಚಿನ್ನ ಸಾಗಣೆ ಪ್ರಕರಣ; 'ಇಡಿ' ವಶಕ್ಕೆ ಶಿವಶಂಕರ್‌

Last Updated 28 ಅಕ್ಟೋಬರ್ 2020, 7:50 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನುತಗೊಂಡಿರುವ ಐಎಎಸ್‌ ಅಧಿಕಾರಿ ಎಂ. ಶಿವಶಂಕರ್‌ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ ವಶಕ್ಕೆ ಪಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್‌ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್‌ ತಿರಸ್ಕರಿಸಿದ ಬಳಿಕ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಇಲ್ಲಿನ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಶಂಕರ್‌ ಅವರನ್ನು ಇ.ಡಿ. ಅಧಿಕಾರಿಗಳು ತಮ್ಮ ವಶಕ್ಕೆ ಪಡೆದರು. ನಂತರ ಕಾರಿನಲ್ಲಿ ಎರ್ನಾಕುಲಂಗೆ ಕರೆದೊಯ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎಐಎ), ಕಸ್ಟಮ್ಸ್‌, ಜಾರಿ ನಿರ್ದೇಶನಾಲಯ ಪ್ರತ್ಯೇಕ ತನಿಖೆ ನಡೆಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT