ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್: ದುಬೈನಿಂದ ಕಳ್ಳ ಸಾಗಣೆ, ₹ 1.15 ಕೋಟಿ ಮೌಲ್ಯದ ಚಿನ್ನ ವಶ

Last Updated 31 ಮಾರ್ಚ್ 2021, 12:17 IST
ಅಕ್ಷರ ಗಾತ್ರ

ಹೈದರಾಬಾದ್: ದುಬೈನಿಂದ ವಿಮಾನದ ಮೂಲಕ ಹೈದರಾಬಾದ್‌ಗೆ ಬಂದ ಐವರು ಪ್ರಯಾಣಿಕರಿಂದ ₹ 1.15 ಕೋಟಿ ಮೌಲ್ಯದ 2.5 ಕೆ.ಜಿ. ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

‘ಈ ಪ್ರಯಾಣಿಕರು ಮಿಕ್ಸರ್ ಗ್ರೈಂಡರ್‌ನ ಮೋಟಾರ್‌ಗಳಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದರು. ಪ್ರಯಾಣಿಕರನ್ನು ವಶಕ್ಕೆ ಪಡೆಯಲಾಗಿದ್ದು, ಅವರನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗುವುದು. ಚಿನ್ನದ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಒಟ್ಟು ಐದು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮತ್ತೊಂದೆಡೆ ದುಬೈಗೆ ತೆರಳುತ್ತಿದ್ದ ಪ್ರಯಾಣಿಕರೊಬ್ಬರ ವಿರುದ್ಧ ವಿದೇಶಿ ವಿನಿಮಯ ಕಳ್ಳಸಾಗಣೆ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT