ಭಾನುವಾರ, ನವೆಂಬರ್ 28, 2021
20 °C

ಚೆನ್ನೈ: ವಿಮಾನ ನಿಲ್ದಾಣದಲ್ಲಿ ₹ 39.95 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ವಶ 

ಪಿಟಿಐ Updated:

ಅಕ್ಷರ ಗಾತ್ರ : | |

ಚಿನ್ನ– ಪ್ರಾತಿನಿಧಿಕ ಚಿತ್ರ

ಚೆನ್ನೈ: ಇಲ್ಲಿಯ ವಿಮಾನ ನಿಲ್ದಾಣಕ್ಕೆ ಭಾನುವಾರ ಬಂದಿಳಿದ ದುಬೈ ಪ್ರಯಾಣಿಕನಿಂದ ₹ 39.95 ಲಕ್ಷ ಮೌಲ್ಯದ 864 ಗ್ರಾಂ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಖಚಿತ ಮಾಹಿತಿಗಳ ಆಧಾರದಲ್ಲಿ ವಾಯು ಗುಪ್ತಚರ ವಿಭಾಗದ ಅಧಿಕಾರಿಗಳು ಚೆನ್ನೈನ ವಿಮಾನ ನಿಲ್ದಾಣಕ್ಕೆ ಬಂದಿಳಿದ 41 ವರ್ಷದ ದುಬೈ ವ್ಯಕ್ತಿಯನ್ನು ತಡೆದು ತಪಾಸಣೆ ನಡೆಸಿದರು. ಈ ವೇಳೆ ಗುದನಾಳದಲ್ಲಿ ಅಡಗಿಸಿ ಇಟ್ಟಿದ್ದ ಚಿನ್ನದ ಗಟ್ಟಿಗಳು ಪತ್ತೆಯಾದವು ಎಂದು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು