ಹೈದರಾಬಾದ್: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ₹ 1.37 ಕೋಟಿ ಮೌಲ್ಯದ 2.9 ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ಧಾರೆ.
ದುಬೈನಿಂದ ಆಗಮಿಸಿದ ವಿಮಾನದಿಂದ ಇಳಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದ ಸಿಬ್ಬಂದಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಬ್ಯಾಗೇಜ್‌ನಲ್ಲಿದ್ದ 1,547 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನ ಮತ್ತು 1,414 ಗ್ರಾಂ ಆಭರಣ ಸೇರಿ ಒಟ್ಟು ₹1.37 ಕೋಟಿ ಮೌಲ್ಯದ 2.9 ಕೆ.ಜಿ ಚಿನ್ನ ವಶಕ್ಕೆ ಪಡೆಯಲಾಗಿದೆ ಎಂದು ಕಸ್ಟಮ್ಸ್‌ನ ಉಪ ಆಯುಕ್ತ ದುಲಿಪ್ ಅಬ್ಹಾಂ ಹೇಳಿದ್ದಾರೆ.
ಚಿನ್ನದ ಸಾಗಣೆ ಕುರಿತಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.