ಸೋಮವಾರ, ಜೂನ್ 27, 2022
22 °C

ರೆಮ್‌ಡಿಸಿವಿರ್‌ ಸಂಗ್ರಹಿಸುವವರ ವಿರುದ್ಧ ಗೂಂಡಾ ಕಾಯ್ದೆ: ಸ್ಟಾಲಿನ್‌ ಎಚ್ಚರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ‘ಕೋವಿಡ್‌ ಚಿಕಿತ್ಸೆಗೆ ಬಳಸಲಾಗುತ್ತಿರುವ ರೆಮ್‌ಡಿಸಿವಿರ್‌ ಔಷಧಿಯನ್ನು ಸಂಗ್ರಹಿಸುವುದು ಮತ್ತು ಆಮ್ಲಜನಕ ಸಿಲಿಂಡರ್‌ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಗೂಂಡಾ ಕಾಯ್ದೆಯಡಿ  ಕ್ರಮಕೈಗೊಳ್ಳಲಾಗುವುದು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಶನಿವಾರ ಹೇಳಿದರು.

‘ಕೋವಿಡ್‌ ಪ್ರಸರಣವನ್ನು ತಡೆಯಲು ಹೇರಲಾಗಿರುವ ಲಾಕ್‌ಡೌನ್‌ ಎಂಬ ‘ಕಹಿ ಗುಳಿಗೆ’ಯನ್ನು ಸಾರ್ವಜನಿಕರು ಸ್ವೀಕರಿಸಿದ್ದಾರೆ. ಇಂತಹ ಸಂದರ್ಭದಲ್ಲೂ ಕೆಲವು ಸಮಾಜ ಘಾತುಕ ವ್ಯಕ್ತಿಗಳು ರೆಮ್‌ಡಿಸಿವಿರ್‌ ಔಷಧಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಅಲ್ಲದೆ ಆಮ್ಲಜನಕ ಸಿಲಿಂಡರ್‌ಗಳನ್ನು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿವೆ’ ಎಂದು ಅವರು ತಿಳಿಸಿದರು.

‘ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಇಂತಹ ಕೃತ್ಯಗಳನ್ನು ದೊಡ್ಡ ಅಪರಾಧವೆಂದು ಪರಿಗಣಿಸಲಾಗುವುದು. ನಾನು ಈಗಾಗಲೇ ಈ ರೀತಿಯ ಕೃತ್ಯ ಎಸಗುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಿದ್ದೇನೆ’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು