ಶುಕ್ರವಾರ, ಆಗಸ್ಟ್ 12, 2022
24 °C

ಜೈಲಿನಲ್ಲೂ ಬೆಂಬಲ, ಹೋರಾಟ ನಿರಂತರ: ಜಾಮಿಯಾ ವಿವಿ ವಿದ್ಯಾರ್ಥಿಗಳ ಘೋಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ನ್ಯಾಯಾಲಯದ ಆದೇಶದಂತೆ ಬಿಡುಗಡೆಗೊಂಡಿರುವ ವಿದ್ಯಾರ್ಥಿಗಳಾದ ನತಾಶಾ ನರ್ವಾಲ್‌, ದೇವಾಂಗನಾ ಕಾಲಿತಾ ಮತ್ತು ಆಸಿಫ್‌ ಇಕ್ಬಾಲ್‌ ತನ್ಹಾ, ಜೈಲಿನಲ್ಲೂ ಅಪಾರ ಬೆಂಬಲ ದೊರಕಿದ್ದು, ನಮ್ಮ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.

ಜೂನ್ 15ರಂದು ಜಾಮೀನು ಮಂಜೂರಾಗಿದ್ದ ಜಾಮಿಯಾ ವಿದ್ಯಾರ್ಥಿ ಆಸಿಫ್‌ ಇಕ್ಬಾಲ್‌ ತನ್ಹಾ, ಜೆಎನ್‌ಯು ವಿದ್ಯಾರ್ಥಿಗಳಾದ ದೇವಾಂಗನಾ ಕಾಲಿತಾ ಮತ್ತು ನತಾಶಾ ನರ್ವಾಲ್‌ ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ವಿಚಾರಣಾ ನ್ಯಾಯಾಲಯ ಗುರುವಾರ ಆದೇಶಿಸಿತ್ತು. ನ್ಯಾಯಾಲಯದ ಆದೇಶದ ಕೆಲವೇ ಗಂಟೆಗಳಲ್ಲಿ ಮೂವರು ವಿದ್ಯಾರ್ಥಿಗಳು ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ.

ಇದನ್ನೂ ಓದಿ: 

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಗಲಭೆಗೆ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿ ಈ ಮೂವರನ್ನು ಕಳೆದ ವರ್ಷದ ಮೇಯಲ್ಲಿ ಬಂಧಿಸಲಾಗಿತ್ತು.

ದೆಹಲಿ ಹೈಕೋರ್ಟ್ ನಿರ್ಧಾರವನ್ನು ಸ್ವಾಗತಿಸಿರುವ ನತಾಶಾ ನರ್ವಾಲ್‌, 'ಜೈಲಿನಲ್ಲೂ ನಮಗೆ ಅಪಾರ ಬೆಂಬಲ ದೊರಕಿತ್ತು. ನಮ್ಮ ಹೋರಾಟ ನಿರಂತರ' ಎಂದು ಘೋಷಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ದೇವಾಂಗನಾ ಕಾಲಿತಾ, 'ಕೇಂದ್ರ ಸರ್ಕಾರವು ಜನರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ ಜನತೆಯಿಂದ ನಮಗೆ ಅಪಾರ ಬೆಂಬಲ ದೊರಕಿತು. ಇದರಿಂದಾಗಿ ಅಲ್ಲಿ (ಜೈಲಿನಲ್ಲಿ) ಬದುಕುಳಿಯಲು ಸಾಧ್ಯವಾಯಿತು' ಎಂದು ಹೇಳಿದ್ದಾರೆ.

ತಿಹಾರ್ ಜೈಲಿನಿಂದ ಹೊರಬಂದ ಜಾಮಿಯಾ ವಿದ್ಯಾರ್ಥಿ ಆಸಿಫ್‌ ಇಕ್ಬಾಲ್‌ ತನ್ಹಾ, 'ಒಂದಲ್ಲ ಒಂದು ದಿನ ಬಿಡುಗಡೆಯಾಗುವ ನಂಬಿಕೆಯನ್ನು ಇಟ್ಟುಕೊಂಡಿದ್ದೆ. ಅಲ್ಲದೆ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ' ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು