ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ 150ನೇ ಸ್ಥಾನ: ಸಂಘಟನೆ ತೀರ್ಮಾನ ಒಪ್ಪದ ಕೇಂದ್ರ

ವಿಶ್ಪ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ
Last Updated 21 ಜುಲೈ 2022, 15:14 IST
ಅಕ್ಷರ ಗಾತ್ರ

ನವದೆಹಲಿ:ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ರಾಷ್ಟ್ರಗಳ ಪೈಕಿ ಭಾರತಕ್ಕೆ 150ನೇ ಸ್ಥಾನ ನೀಡಿದ ‘ರಿಪೋರ್ಟರ್ಸ್‍ ವಿದೌಟ್‍ ಬಾರ್ಡರ್ಸ್‍’ ಸಂಘಟನೆ ರೂಪಿಸಿದ ತೀರ್ಮಾನಗಳನ್ನು ಒಪ್ಪುವುದಿಲ್ಲ ಎಂದು ಸರ್ಕಾರ ಗುರುವಾರ ಸಂಸತ್ತಿಗೆ ತಿಳಿಸಿದೆ.

ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿರುವಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್,‘ಪ್ರಜಾಪ್ರಭುತ್ವದ ಮೂಲಭೂತ ಅಂಶಗಳಿಗೆ ಕಡಿಮೆ ಅಥವಾ ಯಾವುದೇ ತೂಕವಿಲ್ಲ,ಪ್ರಶ್ನಾರ್ಹ ಮತ್ತು ಪಾರದರ್ಶಕವಲ್ಲದ ವಿಧಾನ ಅಳವಡಿಸಿಕೊಳ್ಳುವುದು’ ಸೇರಿದಂತೆ ವಿವಿಧ ಕಾರಣಗಳಿಗಾಗಿ ಸಂಸ್ಥೆ ರೂಪಿಸಿದ ತೀರ್ಮಾನಗಳನ್ನು ಸರ್ಕಾರ ಒಪ್ಪುವುದಿಲ್ಲ ಎಂದು ತಿಳಿಸಿದ್ದಾರೆ.

ಸಂವಿಧಾನದ ಪರಿಚ್ಛೇದ 19ರ ಅಡಿ ಪ್ರತಿಪಾದಿಸಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಎಎಪಿ ಸದಸ್ಯ ಸಂಜಯ್ ಸಿಂಗ್ ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಠಾಕೂರ್ ಪ್ರತಿಕ್ರಿಯಿಸಿದರು.

ಪತ್ರಿಕಾ ಸ್ವಾತಂತ್ರ್ಯ ಕಾಪಾಡಲು ಮತ್ತು ದೇಶದಲ್ಲಿ ಪತ್ರಿಕೆ, ಸುದ್ದಿ ಸಂಸ್ಥೆಗಳ ಗುಣಮಟ್ಟ ಸುಧಾರಿಸಲು 1978ರಲ್ಲಿ ಪ್ರೆಸ್ ಕೌನ್ಸಿಲ್‌ ಆಫ್ ಇಂಡಿಯಾ (ಪಿಸಿಐ) ಸ್ಥಾಪಿಸಲಾಗಿದೆ.ಪತ್ರಿಕಾ ಸ್ವಾತಂತ್ರ್ಯ ಮೊಟಕುಗೊಳಿಸುವುದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ದೂರುಗಳನ್ನು ಪಿಸಿಐ ಪರಿಶೀಲಿಸುತ್ತದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಪತ್ರಕರ್ತರ ಮೇಲಿನ ದಾಳಿಯ ಅಂಕಿ ಅಂಶವನ್ನು ಪ್ರತ್ಯೇಕವಾಗಿ ನಿರ್ವಹಿಸುವುದಿಲ್ಲ ಎಂದು ಪತ್ರಕರ್ತರ ಬಂಧನದ ಕುರಿತು ಖರ್ಗೆ ಅವರ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.

ಮೇ ತಿಂಗಳಲ್ಲಿ ಬಿಡುಗಡೆಯಾದ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದ ಪ್ರಕಾರ, ಭಾರತದ ಶ್ರೇಯಾಂಕವು ಕಳೆದ ವರ್ಷ 142 ನೇ ಸ್ಥಾನದಿಂದ 150 ನೇ ಸ್ಥಾನಕ್ಕೆ ಇಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT