ಶುಕ್ರವಾರ, ಅಕ್ಟೋಬರ್ 30, 2020
24 °C
ರಾಜ್ಯಸಭೆಯಲ್ಲಿ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನ್ ಚೌಬೆ

ರಾಜ್ಯಸಭೆ: ಕೋವಿಡ್‌ ಸೌಲಭ್ಯ ಪರಿಶೀಲನೆಗೆ ತಜ್ಞರ ಸಮಿತಿ

ಪಿಟಿಐ Updated:

ಅಕ್ಷರ ಗಾತ್ರ : | |

ರಾಜ್ಯಸಭೆ ಕಲಾಪ

ನವದೆಹಲಿ: ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೋವಿಡ್-19 ಸೌಲಭ್ಯಗಳನ್ನು ಪರಿಶೀಲಿಸುವುದಕ್ಕಾಗಿ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯ ರಚಿಸಿರುವ ಈ ಸಮಿತಿ ದೇಶದಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್‌-19 ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸುವ ಜತೆಗೆ, ನೀಡುತ್ತಿರುವ ಸೌಲಭ್ಯಗಳಲ್ಲಿರುವ ನ್ಯೂನತೆಯನ್ನು ಗುರುತಿಸಿ, ಸರ್ಕಾರ ಮತ್ತು ಕೋವಿಡ್‌ ಆಸ್ಪತ್ರೆಗಳ ಸಿಬ್ಬಂದಿಗೆ ಮಾರ್ಗದರ್ಶನ ನೀಡಲಿದೆ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ರಾಜ್ಯಸಭೆಗೆ ತಿಳಿಸಿದ್ದಾರೆ.

ತಜ್ಞ ಸಮಿತಿ ರಚಿಸಿರುವ ಕುರಿತು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆಯಲಾಗಿದ್ದು, ಅದರಲ್ಲಿ ಕೊರೊನಾ ವೈರಸ್‌ ಸೋಂಕಿನ ಪರೀಕ್ಷೆ ಮತ್ತು ಚಿಕಿತ್ಸೆಗೆ ವಿಧಿಸಿರುವ ವಿವೇಚನಾಯುಕ್ತ ದರಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ ಎಂದು ಚೌಬೆ ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಯೋಗಾಲಯ ವರದಿಗಾಗಿ ಕಾಯದೇ ಶಂಕಿತ ಕೋವಿಡ್‌ ರೋಗಿಗಳ ಮೃತದೇಹವನ್ನು ತಕ್ಷಣ ಸಂಬಂಧಿಗಳಿಗೆ ಹಸ್ತಾಂತರಿಸಬೇಕು.  ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾರ್ಗಸೂಚಿ ಪ್ರಕಾರವ ಶವಸಂಸ್ಕಾರ ಮಾಡಬೇಕು ಎಂದು ಆ ಸಲಹೆ ನೀಡಿರುವುದಾಗಿ ಹೇಳಿದ್ದಾರೆ.

ಕೆಲವು ರಾಜ್ಯಗಳಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಶವ ಸಂಸ್ಕಾರವನ್ನು ತುಂಬಾ ಅಸೂಕ್ಷ್ಮವಾಗಿ ಮಾಡಲಾಗುತ್ತಿದೆ ಎಂಬ ಸುಪ್ರೀಂ ಕೋರ್ಟ್‌ನ ಅವಲೋಕನದ ಹಿನ್ನೆಲೆಯಲ್ಲಿ, ಸಚಿವ ಚೌಬೆ ಅವರು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ರಾಜ್ಯಸಭೆಗೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು